1. ಸುದ್ದಿಗಳು

ತೋಟಗಾರಿಕೆ ರೈತ, ರೈತ ಮಹಿಳೆಯರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಡಿ. 21ರಿಂದ 23ರವರೆಗೆ ನಡೆಯಲಿರುವ 2020-21ನೇ ಸಾಲಿನ ತೋಟಗಾರಿಕೆ ಮೇಳದಲ್ಲಿ ನೀಡುವ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಠ ಕೃಷಿಕರಿಗೆ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವ್ಯಾಪ್ತಿಯಲ್ಲಿ ಬರುವ ರಾಜ್ಯದ 23 ಜಿಲ್ಲೆಗಳಿಗೆ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆ ಆಯ್ಕೆ ಮಾಡಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಭರ್ತಿ ಮಾಡಿದ ಅರ್ಜಿಗಳನ್ನು ಅ.29ರೊಳಗಾಗಿ ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ದೇವಿಹೊಸೂರು, ಹಾವೇರಿ-ಜಿಲ್ಲೆ ಸಲ್ಲಿಸಬೇಕು. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಹಾವೇರಿ ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ದೇವಿಹೊಸೂರ ಹಾವೇರಿ, ಹಾವೇರಿ ಜಿಲ್ಲೆಯ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಕಚೇರಿಗಳಲ್ಲಿ ಪಡೆಯಬಹುದು.  ಹೆಚ್ಚಿನ ಮಾಹಿತಿಗಾಗಿ ಮೊ: 9449122074, 9480696392 ಅಥವಾ ಶುಲ್ಕರಹಿತ ಉದ್ಯಾನ ಸಹಾಯವಾಣಿ 1800-425-7910 ಗೆ ಕರೆ ಮಾಡಿ ಸಂಪರ್ಕಿಸಬಹುದು.

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಅಲೆಮಾರಿ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗೆ 2020-21ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂ ಖರೀದಿ ಯೋಜನೆ ಹಾಗೂ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು.. ಅಭ್ಯರ್ಥಿಗಳು 18–55 ವರ್ಷದೊಳಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಅರ್ಜಿಯನ್ನು ಹಾವೇರಿ ಜಿಲ್ಲಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ ಪಡೆದು ಅಕ್ಟೋಬರ್ 29 ರೊಳಗೆ ನಿಗಮದ ವೆಬ್‌ಸೈಟ್ www.dbcdc.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅಥವಾ  ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಜಿಲ್ಲೆಯ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Published On: 11 October 2020, 02:10 PM English Summary: Application invited from horticulture farmers for award

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.