News

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಅರ್ಜಿ ಆಹ್ವಾನ

17 March, 2021 8:00 PM IST By:

ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಎಂಒಎಫ್‍ಪಿಐ) ವು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಪಾಲುದಾರಿಕೆಯೊಂದಿಗೆ ಕಿರು ಸಂಸ್ಕರಣಾ ಉದ್ದಿಮೆಗಳ ಉನ್ನತೀಕರಣಕ್ಕಾಗಿ ಹಣಕಾಸು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲ ಒದಗಿಸಲು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಪ್ರಾರಂಭಿಸಿದೆ ಎಂದು ಕಲಬುರಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಒಂದು ಉತ್ಪನ್ನದಡಿ ತೊಗರಿ ಬೆಳೆ ಆಯ್ಕೆಯಾಗಿರುತ್ತದೆ. ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕಾಗಿ ಸಹಾಯಧನ ಬೆಂಬಲ ಶೇ. 35 ರಷ್ಟು ಸಾಲ ಸಂಪರ್ಕಿತ ಅನುದಾನ ನೀಡಲಾಗುತ್ತಿದೆ. ಆಸಕ್ತಿವುಳ್ಳ ಉದ್ದಿಮೆದಾರರು ಪಿಎಂಎಫ್‍ಎಮ್‍ಇ ವೆಬ್‍ಸೈಟ್‍ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಸಹಾಯ ಗುಂಪುಗಳು, ಸಹಕಾರ ಸಂಘಗಳು ಹಾಗೂ ರೈತ ಉತ್ಪಾದಕ ಸಂಘಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 ಮತ್ತಿತರ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು http://pmfme.mofpi.gov.inವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಭತ್ತ ಖರೀದಿಯೂ ಮಾರ್ಚ್ 31 ರವರೆಗೆ

ಜೋಳವಷ್ಟೇ ಅಲ್ಲ ಭತ್ತ ಸಹ ಬೆಂಬಲಬೆಲೆ ಯೋಜನೆಯಡಿ ಮಾರ್ಚ್ 31 ರವರೆಗೆ ಖರೀದಿಸಲಾಗುತ್ತಿದೆ. ಕಲಘಟಗಿ ಮತ್ತು ಅಳ್ನಾವರದ ಎಪಿಎಂಸಿ ಪ್ರಾಂಗಣಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಸಾಮಾನ್ಯ ಹಾಗೂ ಎ ಗ್ರೇಡ್ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 1,868 ರೂ.ಗಳಂತೆ ಖರೀದಿಸಲಾಗುತ್ತಿದೆ. ಜೋಳ ಹಾಗೂ ಭತ್ತ ಬೆಳೆದ ರೈತರಿಗೆ ಯಾವುದೇ ಗರಿಷ್ಠ ಮಾರಾಟಮಿತಿಯನ್ನು ವಿಧಿಸಿಲ್ಲ. ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು

ಹೆಚ್ಚಿನ ಮಾಹಿತಿಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಾರಾಟ ಫೆಡರೇಷನ್ನಿನ ಅಧಿಕಾರಿ – ಮೊ.ಸಂ: 9449864419 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.