1. ಸುದ್ದಿಗಳು

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

Fire-Department

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ ತಾಣ  www.ksp.gov.in ಲಾಗ್ ಇನ್ ಆಗಿ ಜೂನ್ 22 ರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

Published On: 20 June 2020, 07:23 PM English Summary: Applications are invited for 1567 posts of various firefighters

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.