Applications are invited: ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.
ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯನ್ನು ಗುರುತಿಸಿ ಸೆಪ್ಟೆಂಬರ್‍ನಲ್ಲಿ ಜರುಗುವ 2023ರ ಧಾರವಾಡ ಕೃಷಿಮೇಳದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಧಾರವಾಡ ಜಿಲ್ಲೆಯ ಆಸಕ್ತ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನ ಕೇಂದ್ರ, ಸೈದಾಪೂರ ಫಾರ್ಮ ಅಥವಾ www.kvkdharwad.org ವೆಬ್‍ಸೈಟ್‌ನಿಂದಲೂ ಡೌನ್‍ಲೋಡ ಮಾಡಿಕೊಳ್ಳಬಹುದು.
ಅರ್ಜಿಯನ್ನು ನಿಮ್ಮ ಹೊಲದ ಉತಾರದೂಂದಿಗೆ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳ ಶಿಫಾರಸ್ಸಿನೊಂದಿಗೆ ಜುಲೈ 31. 2023 ರೂಳಗಾಗಿ ಕಛೇರಿಯ ಐ.ಸಿ.ಎ.ಆರ್.ಕೃಷಿ ವಿಜ್ಞಾನ ಕೇಂದ್ರಕ್ಕೆ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಧಾರವಾಡ ದೂರವಾಣಿ ಸಂಖ್ಯೆ 0836–2970246 ಸಂಪರ್ಕಿಸಬಹುದು ಎಂದು ಐ.ಸಿ.ಎ.ಆರ್.ಕೃಷಿ ವಿಜ್ಞಾನ ಕೇಂದ್ರ, ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.