1. ಸುದ್ದಿಗಳು

ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಕಾರ್ಮಿಕರಿಗೆ ಪರಿಹಾರ ನೀಡಲು ಅರ್ಜಿ ಆಹ್ವಾನ

 ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2020-21ನೇ ಸಾಲಿನಲ್ಲಿ ಒಂದು ಬಾರಿಯ ಆರ್ಥಿಕ ಪರಿಹಾರ ಸಲುವಾಗಿ ರೂ.2,000 ಗಳ ನೆರವನ್ನು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ವಿದ್ಯುತ್ ಮಗ್ಗ ಘಟಕದ ಮಾಲೀಕರು ರೂ.20 ರ ಬಾಂಡ್ ಪೇಪರ್‍ನಲ್ಲಿ ಕಾರ್ಮಿಕರ ವಿವರಗಳೊಂದಿಗೆ ಮುಚ್ಚಳಿಕೆ ಪತ್ರವನ್ನು ನೀಡಬೇಕು. ಅದರೊಂದಿಗೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೂಲಿ ಕಾರ್ಮಿಕರು ಸ್ವಯಂ ಧೃಡೀಕರಿಸಿದ ಆಧಾರ್ ಕಾರ್ಡ್ ಪ್ರತಿಗಳು, ಆಧಾರ್ ಮಾಹಿತಿಯನ್ನು ಡಿ.ಬಿ.ಟಿ ಗಾಗಿ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರಗಳು, ವಿದ್ಯುತ್ ಮಗ್ಗ ಘಟಕದ ಮುಂದೆ ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಗಳ ಗುಂಪಿನ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್. ನಂಬರನ ವಿದ್ಯುತ್ ಬಿಲ್, ಘಟಕವು ಬಾಡಿಗೆ ಅಥವಾ ಲೀಸ್ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲಾತಿಯನ್ನು ಒದಗಿಸಬೇಕು.

ಘಟಕದ ಉದ್ಯೋಗ್ ಆಧಾರ್/ಪಿ.ಎಂ.ಟಿ/ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುವ ಕೂಲಿ ನೇಕಾರರ ವಿವರಗಳನ್ನು ಒಳಗೊಂಡ ಮಜೂರಿ ಪಾವತಿಯ ಪ್ರತಿ(ಲಭ್ಯವಿದ್ದಲ್ಲಿ)ಯನ್ನು ಸಲ್ಲಿಸಬೇಕು.

ಕಾರಣ ಇದನ್ನು ಕೊನೆಯ ಅವಕಾಶ ಎಂದು ಭಾವಿಸಿ  ಅಕ್ಟೋಬರ್.22 ರೊಳಗೆ  ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕೋರಲಾಗಿದೆ.

ಒಂದು ವೇಳೆ ಈ ಸೌಲಭ್ಯವನ್ನು ಪಡೆಯದಿದ್ದಲ್ಲಿ ತಮ್ಮ ಘಟಕಕ್ಕೆ ನೀಡುತ್ತಿರುವ ವಿದ್ಯುತ್ ರಿಯಾಯಿತಿ ಸೌಲಭ್ಯವನ್ನು ರದ್ದು ಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಸಂಪರ್ಕಿಸಬಹುದು

Published On: 13 October 2020, 09:39 PM English Summary: applications are invited from handloom weavers for relief

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2023 Krishi Jagran Media Group. All Rights Reserved.