News

ಉತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ಬೆಂಗಳೂರು ಕೃಷಿ ವಿವಿ

05 July, 2020 11:25 AM IST By:

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ವಿವಿ ಆಡಳಿತ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು.ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಅಕ್ಟೋಬರ್ 2020 ರಲ್ಲಿ ಆಯೋಜಿಸಲಿರುವ ಕೃಷಿ ಮೇಳ -2020ರ ಸಂದರ್ಭದಲ್ಲಿ ರೈತರಿಗೆ ಪ್ರಶಸ್ತಿಗಳನ್ನು ನೀಡಲಾಗುವುದು.

ನಿಗಧಿತ ಅರ್ಜಿ ನಮೂನೆಯಲ್ಲಿ ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ ಹಾಗೂ ವಿಶ್ವವಿದ್ಯಾಲಯದ ವೆಬ್ಸೈಟನಲ್ಲಿ (www.uasbangalore.edu.in) ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-65 ಈ ವಿಳಾಸಕ್ಕೆ ಜುಲೈ 20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. 080-23330153 ಗೆ ಸಂಪರ್ಕಿಸಬಹುದು.

ಅ) ರಾಜ್ಯ ಮಟ್ಟದ ಪ್ರಶಸ್ತಿಗಳು

1. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ರೈತ ಮಹಿಳೆ ಪ್ರಶಸ್ತಿ
2. ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ/ರೈತಮಹಿಳೆ ಪ್ರಶಸ್ತಿ
3. ಡಾ.ಎಂ.ಎಚ್.ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
4.ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ
5.ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
6.ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತಮಹಿಳೆ ಪ್ರಶಸ್ತಿ

ಅ) ಜಿಲ್ಲಾ ಮಟ್ಟದ ಪ್ರಶಸ್ತಿಗಳು

ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ
2. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ

ಇ) ತಾಲೂಕು ಮಟ್ಟದ ಪ್ರಶಸ್ತಿಗಳು
1, ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ
2. ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ