ಪ್ರಸಕ್ತ 2020-21ನೇ ಸಾಲಿನಲ್ಲಿ ಮೂರು ವರ್ಷದ ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ (ಇಂಗ್ಲೀಷ ಒಂದು ವಿಷಯವಾಗಿ ಅಭ್ಯಸಿಸಿ) ಉತ್ತೀರ್ಣರಾಗಿರಬೇಕು. 42 ಪುರುಷ/ ಮಹಿಳಾ ಅಭ್ಯರ್ಥಿಗಳನ್ನು ಡಿಪ್ಲೋಮಾ ಕೋರ್ಸ್‍ಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದ ಗದಗ-ಬೆಟಗೇರಿಯಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಆಂಧ್ರಪ್ರದೇಶದ ನಲ್ಲೂರಿನ ವೆಂಕಟಗಿರಿಯಲ್ಲಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಹಾಗೂ ಕೇರಳದ ಕಣ್ಣೂರಿನಲ್ಲಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1000 ರೂ. ರಿಂದ 1200 ರೂ. ಗಳ ಶಿಷ್ಯವೇತನ ನೀಡಲಾಗುವುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 15 ರಿಂದ 23 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿ 15 ರಿಂದ 25 ವರ್ಷದೊಳಗಿರಬೇಕು.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಪಡೆದು ಭರ್ತಿ ಮಾಡಿ ನೇರವಾಗಿ 2020ರ ಸೆಪ್ಟೆಂಬರ್ 10ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ-ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08354-235463 ಸಂಪರ್ಕಿಸಿ ಪಡೆಯಬಹುದಾಗಿದೆ.