ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿದೆ.
ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ ಎಂದು ಧಾರವಾಡ ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾರ, ಸ್ಥಳಿಯ ಸಂಸ್ಥೆ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿ ಪ್ರಥಮ ಪ್ರಯತ್ನದಲ್ಲೇ ಎಸ್.ಎಸ್.ಎಲ್.ಸಿ ಅಥವಾ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಅಧಿಕ ಅಂಕ ಪಡೆದು ತೇರ್ಗಡೆಯಾಗಿರಬೇಕು. ಅರ್ಹ ವಿದ್ಯಾರ್ಥಿಗಳು ಮೇ. 31ರ ಒಳಗೆ https://bit.ly/ksgeapp2023 ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ವ್ಯವಸ್ಥಾಪಕರಾದ ಸುರೇಶ.ಎನ್. 080-22354784/83, ಲೆಕ್ಕ ಸಹಾಯಕರಾದ ಸೈಯದ್ ಜಬಿ-9902135813, ಧಾರವಾಡ ಜಿಲ್ಲಾ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ-9448668221 ಹಾಗೂ ಖಜಾಂಚಿ ರಾಜಶೇಖರ ಬಾಣದ -9448831707 ಅವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share your comments