1. ಸುದ್ದಿಗಳು

ಮಹಿಳೆಯರಿಗೆ ಸಂತಸದ ಸುದ್ದಿ- ಸ್ವ ಉದ್ಯೋಗ ಕೈಗೊಳ್ಳಲು 3 ಲಕ್ಷ ರೂಪಾಯಿಯವರೆಗೆ ಸಾಲ

ಕೊರೋನಾ ಲಾಕ್ಡೌನ್ ನಿಂದಾಗಿ ಮಹಿಳೆಯರು ಕೆಲಸ ಕಳೆದುಕೊಂಡು ಏನಾದರೊಂದು ಸ್ವಂತ ಉದ್ಯೋಗ ಮಾಡಲು ಬಯಸಿದ್ದರೆ ಶೇ. 50 ರಷ್ಟು ಸಹಾಯಧನ ಬ್ಯಾಂಕ್ ಸಾಲ ನೀಡಲಿದೆ. ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.  ಇದಕ್ಕೆ ಸಂಪೂರ್ಣ ಮಾಹಿತಿ ಇಲ್ಲಿದೆ.

2020-21ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನಿರುದ್ಯೋಗಿ ಮಹಿಳೆಯರು ಸ್ವ ಉದ್ಯೋಗ ಕೈಗೊಳ್ಳಲು 3 ಲಕ್ಷಗಳ ವರೆಗೆ ಬ್ಯಾಂಕ್ ನಲ್ಲಿ ಸಾಲ ಪಡೆಯಬಹುದು.  ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮಹಿಳೆಯರಿಗೆ ಶೇಕಡ 50% ರಷ್ಟು ಹಾಗೂ ಸಾಮಾನ್ಯ ವರ್ಗದ (ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲರು), ಮಹಿಳೆಯರಿಗೆ ಶೇಕಡ 30%ರಷ್ಟು ಸಹಾಯಧನ ನೀಡಲಾಗುತ್ತದೆ.

ಉದ್ಯೋಗಿನಿ ಯೋಜನೆಯಡಿ ಸಹಾಯಧನಕ್ಕಾಗಿ ನಿರುದ್ಯೋಗಿ ಮಹಿಳೆಯರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂರ್ಪಕಿಸಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 23  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಸಲು  ಬೇಕಾಗುವ ಅಗತ್ಯ ದಾಖಲೆಗಳು:

 ಆಧಾರ್ ಕಾರ್ಡ್‌. ಪಡಿತರ ಚೀಟಿ,  ವಿದ್ಯಾರ್ಹತೆ ದಾಖಲೆಗಳು (ಇದ್ದಲ್ಲಿ)ಜನನ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಝಿರಾಕ್ಸ್, ಅದರಲ್ಲಿ ಹೆಸರು, ಬ್ಯಾಂಕಿನ ಹೆಸರು, ಐಎಫ್ಎಸ್ಸಿ, ಎಮ್ಐಸಿಆರ್ ಕೋಡ್ ಇರಬೇಕು. ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕು.

ಅರ್ಹತೆ: ಅರ್ಜಿದಾರರು 18-35 ವಯೋಮಾನದವರಾಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ 1.5 ಲಕ್ಷ ಒಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು ಸಂರ್ಪಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Published On: 02 October 2020, 08:30 PM English Summary: applications invited for subsidy under udyogini scheme from women

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.