News

Applications invited : ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ, ಆಗಸ್ಟ್‌ 10 ಕೊನೆ ದಿನ

25 July, 2023 11:21 AM IST By: Kalmesh T
Applications invited from farmers for subsidy, August 10 last date

Subsidy for horticulture crop : ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಇಲ್ಲಿದೆ ಸಿಹಿಸುದ್ದಿ. 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹೊಸಪ್ರದೇಶ ವಿಸ್ತರಣೆಯಡಿ ಈ ತೋಟಗಾರಿಕೆ ಬೆಳೆಗಳ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಆಗಸ್ಟ್‌ 10 ಕೊನೆ ದಿನವಾಗಿದೆ.

ಧಾರವಾಡ : ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹೊಸಪ್ರದೇಶ ವಿಸ್ತರಣೆಯಡಿ ಹಣ್ಣುಗಳಾದ ಬಾಳೆ, ಮಾವು, ಡ್ರ್ಯಾಗನ್, ಸ್ಟ್ರಾಬೆರಿ ಮತ್ತು ಹೂವುಗಳಾದ ಗುಲಾಬಿ, ಸುಗಂಧರಾಜ, ಗ್ಲ್ಯಾಡಿಯೋಲಸ್, ಆಸ್ಟರ್, ಚೆಂಡು ಹೂ, ಸೇವಂತಿಗೆ, ತರಕಾರಿಗಳ ಪ್ರದೇಶ ವಿಸ್ತರಣೆ, ಗೋಡಂಬಿ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅಷ್ಟೇ ಅಲ್ಲದೇ ಜೊತೆಗೆ ಮಾವು ಪನಶ್ಚೇತನ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ ಹಸಿರುಮನೆ, ನೆರಳುಪರದೆ, ಪ್ಲಾಸ್ಟಿಕ ಮಲ್ಚಿಂಗ್, ಕೊಯ್ಲೋತ್ತರ ನಿರ್ವಹಣೆ ಅಡಿ ಪ್ಯಾಕ್‍ಹೌಸ್, ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿ ಘಟಕಗಳಿಗಾಗಿ ರೈತರಿಗೆ ಸಹಾಯಧನ ಸೌಲಭ್ಯ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಆಗಸ್ಟ್ 10 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿಬಹುದೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ (National Horticulture Mission) ಉದ್ದೇಶಗಳು

ಕೇಂದ್ರ ಸರ್ಕಾರದ ಈ ಯೋಜನೆಯಡಿ, ದೇಶದ ರೈತರಿಗೆ ಹೆಚ್ಚಿನ ಬೆಲೆಗೆ ತರಕಾರಿ, ಹಣ್ಣು, ಹೂವು ಮತ್ತು ಸಾಂಬಾರ ಪದಾರ್ಥಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುತ್ತಿದೆ.

ಈ ಯೋಜನೆಯಡಿ ರೈತರಿಗೆ ನೀರಾವರಿ, ನೆಟ್ ಹೌಸ್, ಶೇಖರಣೆ ಮತ್ತು ಬೇಲಿ ಇತ್ಯಾದಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.