ಬೆಳೆವಿಮೆ ಯೋಜನೆಯಡಿ ನೋಂದಾಯಿಸಿದ ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆ, ಪ್ರವಾಹ ಅಥವಾ ಇತರೆ ಪ್ರತಿಕೂಲ ಹವಾಮಾನ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದ್ದಲ್ಲಿ ಸ್ಥಳೀಯ ವಿಪತ್ತು (Localise calamity) ಯಡಿ ಬೆಳೆವಿಮೆ ಪರಿಹಾರಕ್ಕಾಗಿ 72 ಗಂಟೆಯೊಳಗೆ ಬೆಳೆಹಾನಿ ಕುರಿತು ಮಾಹಿತಿಯನ್ನು ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ್ ಕಂಪನಿ ಲಿ. ಸಹಾಯವಾಣಿ ಸಂಖ್ಯೆ 1800-200-5142 ಗೆ ಕರೆ ಮಾಡಿ ವಿವರಗಳೊಂದಿಗೆ ತಮ್ಮ ಅರ್ಜಿಯನ್ನು ದಾಖಲಿಸಬಹುದಾಗಿದೆ ಎಂದು ಕಲಬುರಗಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2021ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ ಕಂಪನಿ ಲಿ. ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.
ರೈತ ಭಾಂದವರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಂಬAಧಪಟ್ಟ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ಸಹಾಯವಾಣಿ ಸಂಖ್ಯೆ 1800-200-5142 ಕರೆ ಮಾಡಿ ಮಾಹಿತಿ ನೀಡಬೇಕು. ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆಯ ಈ ಕೆಳಕಂಡ ತಾಲೂಕಿನ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಬೇಕು.
ಕಲಬುರಗಿ ಜಿಲ್ಲೆ-ಮೊಬೈಲ್ ಸಂಖ್ಯೆ 9731499917, 8867508750, 9538185343, 9620006812, ಚಿತ್ತಾಪೂರ-9731499917, ಅಫಜಲಪುರ-9902356434, ಜೇವರ್ಗಿ-9731499917, ಆಳಂದ-9731499917, ಕಲಬುರಗಿ-9538185343, ಚಿಂಚೋಳಿ-8095384057, 9731499917 ಹಾಗೂ ಸೇಡಂ-7204579007 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ?
ಬೆಳೆ ನಷ್ಟ ಅಥವಾ ಬೆಳೆ ವಿಫಲವಾದಾಗ ನಷ್ಟ ಹೊಂದಿದ ರೈತರ ಕೈ ಹಿಡಿಯಲು ಸರಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಪರಿಚಯಿಸಿದೆ. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.
ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.
ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.