News

ಗುಲ್ಬರ್ಗ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

27 February, 2021 8:53 PM IST By:

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ, ಕೈಗಾರಿಕಾ ತರಬೇತಿ ಕೇಂದ್ರದಲ್ಲಿ 2021-22ನೇ ಸಾಲಿನ ಎಲೆಕ್ಟ್ರೀಷಿಯನ್ ವೃತ್ತಿಯ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ, ವಯಸ್ಸು, ವೇತನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಕೆ ವಿಧಾನ ಮತ್ತು ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸಾಮಾನ್ಯ ಲಕೋಟೆಯಲ್ಲಿಯೇ ಅರ್ಜಿ ಸಲ್ಲಿಸಬೇಕಾಗುತ್ತದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  ಮಾರ್ಚ್ 18.  ಎಸ್‌ಎಸ್‌ಎಲ್‌ಸಿ ನಂತರ ಎರಡು ವರ್ಷ ಅವಧಿಯ ಐಟಿಐ ತರಬೇತಿ ಹೊಂದಿರುವ ಐಟಿಐ ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಅಂಕಪಟ್ಟಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿ: (ಫೆ.26, 2021ಕ್ಕೆ ಅನ್ವಯವಾಗುವಂತೆ)ಕನಿಷ್ಠ ವಯೋಮಿತಿ : 16 ವರ್ಷ, ಗರಿಷ್ಠ ವಯೋಮಿತಿ 25 ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಅಭ್ಯರ್ಥಿಗೆ . ಕನ್ನಡ ಓದಲು, ಬರೆಯಲು ಗೊತ್ತಿರಬೇಕು. ಕನ್ನಡಿಗರಿಗೆ ಮೊದಲ ಆದ್ಯತೆಯದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಆಭ್ಯರ್ಥಿಗಳು gescom.karnataka.gov.in ವೆಬ್ ಸೈಟ್ ನಿಂದ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಬೇಕು. ಪೂರ್ಣ ವಿವರ ಇರುವ ಅರ್ಜಿಯನ್ನು ಎಲ್ಲಾ ದಾಖಲೆಯೊಂದಿಗೆ ``ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ), ನಿಗಮ ಕಚೇರಿ, ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಕಲಬುರಗಿ'' ಇವರಿಗೆ ಸಲ್ಲಿಸಬೇಕು. ಲಕೋಟೆ ಮೇಲೆ 2021-22ನೇ ಸಾಲಿನ ಶಿಶಿಕ್ಷು ಆಯ್ಕೆಗೆ ಅರ್ಜಿ ಎಂದು ಸ್ಪಷ್ಟವಾಗಿ ಬರೆದಿರಬೇಕು. 

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :

ಎಸ್ ಎಸ್ ಎಲ್ ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ,  ಐಟಿಐ (ITI) ಪ್ರಮಾಣಪತ್ರ,  ಜಾತಿ ಪ್ರಮಾಣಪತ್ರ (cast certificate).  ವೈದ್ಯಕೀಯ ಯೋಗ್ಯತಾ ಪತ್ರ.  ಗಣ್ಯ ವ್ಯಕ್ತಿಗಳಿಂದ ಪಡೆದ ನಡತೆ ಪ್ರಮಾಣ ಪತ್ರ.  ಎರಡು ಭಾವಚಿತ್ರ
 ಸ್ವವಿಳಾಸ ಇರುವ 4X9 ಇಂಚು ಅಳತೆಯ ಒಂದು ಲಕೋಟೆ ಎಲ್ಲಾ ದಾಖಲೆಗಳು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.