News

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಮ್ಮತಿ.. ಸಚಿವರ ಸ್ಪಷ್ಟನೆ..!

21 May, 2022 10:11 AM IST By: Kalmesh T
Approval for appointment of 300 Assistant Agricultural Officer posts

ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಆರ್ಥಿಕ ಇಲಾಖೆಯಿಂದ ಸಮ್ಮತಿ ದೊರೆತಿರುವುದಾಗಿ ಸಚಿವ ಬಿ.ಸಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕೃಷಿ ಇಲಾಖೆಯ ಹುದ್ದೆಗಳಿಗೆ ಶೀಘ್ರ ನೇಮಕ ಅಧಿಸೂಚನೆ ಬಿಡುಗಡೆ ಆಗಲಿದೆ.

ಇದನ್ನೂ ಓದಿರಿ: Recruitment: ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ನೇಮಕಾತಿ; ₹85000 ಸಂಬಳ!

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ, ಜೋನ್ ಪ್ರಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!

ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವಿದ್ಯಾರ್ಹತೆ

ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಪಾಸ್‌ ಮಾಡಿರಬೇಕು.

ಈ ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಕೃತ ನೇಮಕಾತಿ ಅಧಿಸೂಚನೆ ಬಿಡುಗಡೆ ಆಗಲಿದೆ.

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…

ಕೃಷಿ ಪದವೀಧರರು 85% ಉಳಿದ 15% ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

ಕಪ್ಪು ಗೋಧಿಯ ಬಗ್ಗೆ ನಿಮಗೆ ಗೊತ್ತೆ? ಇಲ್ಲಿದೆ ರೈತರಿಗೆ ಲಾಭದಾಯಕ ಕೃಷಿಯ ಐಡಿಯಾ!

ಮೇ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು! ಇದರಿಂದ ರೈತರಿಗಾಗಲಿದೆ ಹೆಚ್ಚಿನ ಲಾಭ