Asani Cyclone ಪರಿಣಾಮ
ಅಸಾನಿ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನು ಓದಿರಿ:
GOODNEWS: ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ಧನ.. ಅರ್ಜಿ ಸಲ್ಲಿಕೆ ಹೇಗೆ..?
Diesel ದರ R.25 ಏರಿಕೆ! ಎಲ್ಲೆಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯಾದ್ಯಂತ ಗುಡುಗು, ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 24 ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಬಹುದು ಎನ್ನಲಾಗಿದೆ.
ಎಲ್ಲೆಲ್ಲಿ ಸುರಿಯಲಿದ್ದಾನೆ ಮಳೆರಾಯ
ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲಿ ನಿನ್ನೆ ಮಳೆಯಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮವಾಗಿ ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರಂ ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ ಮಳೆಯಾಗಿದೆ. ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕುರುಬರಹಳ್ಳಿ, ಪದ್ಮನಾಭನಗರ, ಗಾಂಧಿನಗರ, ಕಾಟನ್ ಪೇಟೆ ಹಾಗೂ ಕಬ್ಬನ್ ಪಾರ್ಕ್, ಕೆಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ನಗರದ ಹೊರ ಭಾಗದಲ್ಲಿ ಮಳೆಯಾಗಿದೆ.
ಇನ್ನಷ್ಟು ಓದಿ:
IMPORTANT: PPF ಖಾತೆದಾರರೆ ಗಮನವಿರಲಿ..ಈ ನಿಯಮ ಉಲ್ಲಂಘಿಸಿದ್ರೆ ನಿಮ್ಮ ಬಡ್ಡಿ ಹಣ ಹೋಗೋದು ಫಿಕ್ಸ್..!
ಭಾರತದಿಂದ IOS-Andriodಗೆ ಟಕ್ಕರ್! ಸ್ವಂತ ಮೊಬೈಲ್ ಒಎಸ್ ತಯಾರಿಸಲಿದೆಯಾ India
ಇನ್ನು ಮಾರ್ಚ್ 24 ಮತ್ತು 25ರಂದು ಗದಗ, ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಮತ್ತು ರೈತಾಪಿ ವರ್ಗ ಸಂತಸಗೊಂಡಿದ್ದಾರೆ. ಆದರೆ ಕೆಲ ಕಡೆ ಸಿಡಿಲು, ಗಾಳಿಯ ಆರ್ಭಟ ಕೂಡ ಕಂಡು ಬಂದಿದೆ. ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಕಡೆ ಅಡಕೆ, ತೆಂಗು ಬೆಳೆ ಹಾನಿಯಾಗಿದೆ.
ಮತ್ತಷ್ಟು ಓದಿರಿ: