ಕಬ್ಬಿಗೆ ಸೂಕ್ತ ಸಲಹಾ ಬೆಲೆ ನಿಗದಿ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಬ್ಬು ಬೆಳೆಗಾರರು ಹಾಗೂ ರೈತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.
Sugarcane| ಕಬ್ಬು ಬೆಳಗಾರರಿಗೆ 21 ಕೋಟಿ ಪಾವತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇದೀಗ ಗಡುವು ನಿಗದಿ ಮಾಡಿದ್ದು, ಡಿಸೆಂಬರ್ 23ರ ಒಳಗಾಗಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದೆ ಇದ್ದರೆ, ಡಿಸೆಂಬರ್ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Sugarcane Growers| ಕಬ್ಬು ಬೆಳೆಗಾರರಿಗೆ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ!
ಕಬ್ಬಿನ ಎಫ್‌ಆರ್‌ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿದ್ದಾರೆ. ಅದರಂತೆ ಡಿಸೆಂಬರ್ 23 ವಿಶ್ವ ರೈತ ದಿನದ ಆಚರಣೆಯ ಒಳಗೆ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ, 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದರು.
ಕಳೆದ ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು, ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿದ್ದಾರೆ. ಎಫ್ಆರ್‌ಪಿ ನಿಯಮ ಪ್ರಕಾರ 14 ದಿವಸದಲ್ಲಿ ಪಾವತಿಸಬೇಕು ಕಾರ್ಖಾನೆಗಳು ಉಲ್ಲಂಘನೆ ಮಾಡಿ,ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿದ್ದಾರೆ ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ಮಾಡಲು, ಸಂಯುಕ್ತ ಕಿಸಾನ್ ಮೋರ್ಚ ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ, ಪಂಜಾಬ್ ಆಗಮಿಸುತ್ತಿದ್ದಾರೆ ಒಂದು ವರ್ಷ ದೆಹಲಿಯ ಗಡಿಯಲ್ಲಿ ಹೋರಾಟ ಮಾಡಿದ ಮುಖಂಡರು. ಡಿಸೆಂಬರ್ 19 ಅಥವಾ 20ರಂದು ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಹಾಗೂ ಸಂಸದರ ನಿಯೋಗದೊಂದಿಗೆ, ಕೇಂದ್ರ ಕೃಷಿ ಸಚಿವ ಹಾಗೂ ಆಹಾರ ಸಚಿವರನ್ನ ಭೇಟಿ ಮಾಡಿ ಕಬ್ಬು ಬೆಳೆಗಾರರ ಜಲಂತ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಅವರು ತಿಳಿಸಿದ್ದಾರೆ.
ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪರಶುರಾಮ್, ಸುರೇಶ್, ರೇವಣ್ಣ, ಮೈಸೂರು ಜಿಲ್ಲೆಯ ರಂಗಸಮುದ್ರ,ಹಿಟ್ಟುವಳ್ಳಿ ಗ್ರಾಮ ಸೇರಿದಂತೆ ವಿವಿಧ ಭಾಗದಿಂದ ಆಗಮಿಸಿದ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Share your comments