1. ಸುದ್ದಿಗಳು

ಅತ್ತಿಬೆಲೆ ದುರಂತ: ಕರ್ನಾಟಕದಲ್ಲಿ ಈ ಬಾರಿ ದೀಪವಾಳಿಗೆ ಪಟಾಕಿ ಇಲ್ಲ!

Hitesh
Hitesh
Atthibele Tragedy: No fireworks for Diwali this time in Karnataka!

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡಿದ್ದು, ಕೆಲವು ಗಂಭೀರವಾದ ಕ್ರಮಗಳನ್ನು ಕೈಗೊಂಡಿವೆ.

ಹೀಗಾಗಿ, ದೀಪಾವಳಿಗೆ ಪಟಾಕಿ ಸಿಡಿಸಲು ಕೆಲವು ನಿರ್ಬಂಧಗಳನ್ನು ವಿಧಿಸಿದೆ.

ಈಚೆಗೆ ಅತ್ತಿಬೆಲೆಯ (Attibele) ಪಟಾಕಿ‌ ಗೋಡೌನ್‌ನಲ್ಲಿ (Fireworks godown) ಭಾರೀ ಪ್ರಮಾಣದ ಅಗ್ನಿ ದುರಂತ ಸಂಭವಿಸಿದೆ.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 14 ಜನ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಇನ್ಮುಂದೆ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು

ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ

ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.  

ಅಲ್ಲದೇ ಸುಪ್ರೀಂಕೋರ್ಟ್‌ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು

ಹಾಗೂ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.  

ಅತ್ತಿಬೆಲೆ ಪಟಾಕಿ ಗೋಧಾಮಿಗೆ ಬೆಂಕಿ: ಅವಘಡಕ್ಕೆ ಇದೇ ಕಾರಣ ?

ಅತ್ತಿಬೆಲೆ ಪಟಾಕಿ ದುರಂತ: ಹಿರಿಯ ಅಧಿಕಾರಿಗಳೊಂದಿಗೆ ಸಭೆ  

ರಾಜ್ಯದಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.

ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.

ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು

ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು.

ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದರು.

ಎಲ್ಲ ಪಟಾಕಿ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು.

ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು.

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್‌ ನೀಡುವ ಬಗ್ಗೆ ತೀರ್ಮಾನಿಸಬೇಕು.

ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ.

ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸೂಚನೆ ನೀಡಿದರು.

ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು

ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು.

ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ

ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೇ

ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ.

ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ.

ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು

ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ.

ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು.

ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು.

ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ

ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದರು.

ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು.

ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು.

ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ತಾಕೀತು ಮಾಡಿದರು.  

ಇನ್ನು ಅತ್ತಿಬೆಲೆ ಅಗ್ನಿದುರಂತ (Atthibele Agnipurta)ದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Published On: 11 October 2023, 04:28 PM English Summary: Atthibele Tragedy: No fireworks for Diwali this time in Karnataka!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.