1. ಸುದ್ದಿಗಳು

ಅಕ್ಟೋಬರ್ ವರೆಗೆ ನದಿಮರಳು ಗಣಿಗಾರಿಕೆಗೆ ನಿರ್ಬಂಧ

Maltesh
Maltesh
Ban on river sand mining till October

ಬೆಳಗಾವಿ: ಜಿಲ್ಲೆಯ ಎಲ್ಲ ಗಣಿಗಾರಿಕೆ, ಕ್ರಷರ್ ಹಾಗೂ ಮರಳು ಸಾಗಾಣಿಕೆಯ ವಾಹನಗಳಿಗೆ ಇದೇ ಜುಲೈ 15 ರ ಒಳಗಾಗಿ ಜಿಪಿಎಸ್ ಅಳವಡಿಸುವುದು ಕಡ್ಡಾಯ. ಒಂದು ವೇಳೆ ಜಿಪಿಎಸ್ ಇಲ್ಲದಿರುವ ವಾಹನಗಳಲ್ಲಿ ಸಾಗಾಣಿಕೆ ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಗಣಿಗಾರಿಕೆಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಜಿಲ್ಲಾ ಟಾಸ್ಕಫೋರ್ಸ್(ಗಣಿ) ಸಮಿತಿ ಸಭೆ ಹಾಗೂ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಸಮಿತಿ ಮತ್ತು ಜಿಲ್ಲಾ ಮರಳು ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಪಿಎಸ್ ಅಳವಡಿಸಲು ಕ್ರಮ ಕೈಗೊಳ್ಳದಿದ್ದರೆ ಕ್ರಷರ್ ಮತ್ತು ಗಣಿಗಾರಿಕೆ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಜಿಪಿಎಸ್ ಅಳವಡಿಕೆಗೆ ಜುಲೈ 15 ರವರೆಗೆ ಕಾಲಾವಕಾಶ ನೀಡಲಾಗುತ್ತದೆ. ಜುಲೈ 15 ರಿಂದ ಜಿಪಿಎಸ್ ಅಳವಡಿಸಿರುವುದನ್ನು ಪರಿಶೀಲನೆ ಆರಂಭಿಸಲಾಗುತ್ತದೆ. ಒಂದು ವೇಳೆ ಜಿಪಿಎಸ್ ಅಳವಡಿಸದಿದ್ದರೆ ಅಂತಹ ವಾಹನಗಳ ಬಳಕೆಯನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.

ವಾಹನಗಳಿಗೆ ಜಿಪಿಎಸ್ ಇಲ್ಲದಿದ್ದರೆ ಪರವಾನಿಗೆ ರದ್ಸುಗೊಳಿಸಬೇಕು. ವಾಹನಗಳಿಗೆ ಜಿಪಿಎಸ್ ಅಳವಡಿಸುವುದು ಆಯಾ ಕ್ವಾರಿ ಅಥವಾ ಕ್ರಷರ್  ಮಾಲೀಕರ ಜವಾಬ್ದಾರಿಯಾಗಿರುತ್ತದೆ ಎಂದು  ತಿಳಿಸಿದರು.

ಅಕ್ಟೋಬರ್ ವರೆಗೆ ನದಿಮರಳು ಗಣಿಗಾರಿಕೆಗೆ ನಿರ್ಬಂಧ:

ಸರಕಾರದ ಮಾರ್ಗಸೂಚಿ ಪ್ರಕಾರ ಜೂನ್ ಮಾಹೆಯಿಂದ ಅಕ್ಟೋಬರ್ 1 ವರೆಗೆ ನದಿಮರಳು ಗಣಿಗಾರಿಕೆಗೆ ಅವಕಾಶವಿರುವುದಿಲ್ಲ. ಆದ್ದರಿಂದ ಅಕ್ಟೋಬರ್ ವರೆಗೆ ಯಾವುದೇ ರೀತಿಯ ಗಣಿಗಾರಿಕೆ ಚಟುವಟಿಕೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಅವಧಿಯಲ್ಲಿ ಮರಳು ಗಣಿಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸ್ ಅಥವಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಅವಧಿಯಲ್ಲಿ ನಿರ್ಮಾಣ ಕೆಲಸಗಳಿಗೆ ಅಗತ್ಯವಿರುವ ಎಂ.ಸ್ಯಾಂಡ್ ಸಾಗಾಣಿಕೆಗೆ ಮಾತ್ರ ಅವಕಾಶವಿರುತ್ತದೆ ಎಂದು ಹೇಳಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿಯನ್ನು ನೀಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Published On: 06 July 2023, 05:34 PM English Summary: Ban on river sand mining till October

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.