News

Gkvk ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2023 ಇಂದಿನಿಂದ

17 November, 2023 10:23 AM IST By: Hitesh
ಬೆಂಗಳೂರು ಕೃಷಿ ಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ  ಕೃಷಿ ಮೇಳ-2023 ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಕೃಷಿ ಮೇಳಕ್ಕೆ ಬರುವವರಿಗೆ ಪ್ರವೇಶ ಉಚಿತವಾಗಿದೆ. ಜಿಕೆವಿಕೆಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ

ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಸಹ ಇರಲಿದೆ.  

ಅಲ್ಲದೇ ವಾಹನ ಸವಾರರಿಗೆ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಕೃಷಿ ಮೇಳದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾಗವಹಿಸಲಿದ್ದಾರೆ.  

ಐದು ಹೊಸ ತಳಿಗಳ ಪರಿಚಯ!

ಕೃಷಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನವೆಂಬರ್‌ 17ರಿಂದ 20ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ

'ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳು' ಎಂಬ ಘೋಷವಾಕ್ಯದಡಿ ಕೃಷಿ ಮೇಳ ಆಯೋಜಿಸಲಾಗಿದೆ.

ಕೃಷಿ ವಿವಿ ಸಂಶೋಧಕರು ಅಭಿವೃದ್ಧಿಪಡಿಸಿರುವ ಐದು ಹೊಸ ತಳಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ.