1. ಸುದ್ದಿಗಳು

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ; ಸುರಂಗ ರಸ್ತೆ ಇಲ್ಲ!

Hitesh
Hitesh
Bannerghatta National Park, Bangalore; No tunnel road!

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಬಳಿ ಹಾದು ಹೋಗಲಿದ್ದ ಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆಯ ಸುರಂಗ ಕಾಮಗಾರಿಯನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Nandini and Amul| ನಂದಿನಿ ಮತ್ತು ಅಮುಲ್‌ ಬ್ರ್ಯಾಂಡ್‌ ವಿಲೀನಕ್ಕೆ ವಿರೋಧ   

 

ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ  ನಡೆದ ಸಭೆಯ ಬಳಿಕ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹೆದ್ದಾರಿ ನಿರ್ಮಾಣ ಕೈಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

STTR ಹೆದ್ದಾರಿ ಬನ್ನೆರುಘಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಯೋಜನೆಯಾಗಿತ್ತು. ಆದರೆ, ಇಲ್ಲಿನ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ನಿರ್ಮಿಸಬಾರದು ಎಂದು ರಾಜ್ಯ ವನ್ಯಜೀವಿ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ  

 

ಹೀಗಾಗಿ ಈ ಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆಯ ಪ್ರಸ್ತಾಪ ಕೈಬಿಡಲಾಗಿದೆ. ಬನ್ನೇರುಘಟ್ಟ ಉದ್ಯಾನದಿಂದ ದೂರದಲ್ಲಿ ಹೊರಭಾಗದಲ್ಲಿ ರಸ್ತೆ ನಿರ್ಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. 

ಸುಮಾರು 17 ಸಾವಿರ ಕೋಟಿ ಮೊತ್ತದ ಉದ್ದೇಶಿತ ಈ ಹೆದ್ದಾರಿಯು 288 ಕಿಲೋ ಮೀಟರ್ ಉದ್ದವಿತ್ತು. ತಮಿಳುನಾಡಿನ ಪ್ರದೇಶದಲ್ಲಿ 45 ಕಿಲೋ ಮೀಟರ್‌ ಹಾದು ಹೋಗಲಿದೆ.

ಯೋಜನೆಗಾಗಿ ಈಗಾಗಲೇ 6,000 ಕೋಟಿ ಮೊತ್ತದಲ್ಲಿ 136 ಕಿಲೋ ಮೀಟರ್‌ ಮಾರ್ಗಕ್ಕೆ ಟೆಂಡರ್ ಪ್ರಕ್ರಿಯೆ ನಡೆದಿದೆ. 2025ಕ್ಕೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

Gold Rate| ಹೊಸ ವರ್ಷದ ಮೊದಲ ವಾರವೇ ಚಿನ್ನ, ಬೆಳ್ಳಿದರ ಹೆಚ್ಚಳ! 

ಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸುಲಿಬೆಲೆ, ಹೊಸಕೋಟೆ, ಸರ್ಜಾಪುರ, ಅತ್ತಿಬೆಲೆ, ಆನೇಕಲ್,

ತಟ್ಟೆಕೆರೆ, ಕನಕಪುರ, ರಾಮನಗರ, ಮಾಗಡಿ ಮೂಲಕ ಹಾದು ಹೋಗಲಿದೆ.

ಎಸ್‌ಟಿಟಿಆರ್ ಹೆದ್ದಾರಿ ಬನ್ನೆರುಘಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದೆ. ಯಾವ ಕಾರಣಕ್ಕೂ ಇಲ್ಲಿನ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ನಿರ್ಮಿಸಬಾರದು ಎಂದು ರಾಜ್ಯ ವನ್ಯಜೀವಿ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ಹೀಗಾಗಿ ಈ ಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆಯ ಪ್ರಸ್ತಾಪ ಕೈಬಿಡಲಾಗಿದೆ. ಬನ್ನೇರುಘಟ್ಟ ಉದ್ಯಾನದಿಂದ ದೂರದಲ್ಲಿ ಹೊರಭಾಗದಲ್ಲಿ ರಸ್ತೆ ನಿರ್ಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಉದ್ದೇಶಿತ ಈ ಯೋಜನೆಗೆ 17 ಸಾವಿರ ಕೋಟಿ ಮೊತ್ತದ ಉದ್ದೇಶಿತ ಈ ಹೆದ್ದಾರಿಯು 288 ಕಿಲೋ ಮೀಟರ್ ಉದ್ದವಿದ್ದು, ತಮಿಳುನಾಡಿನ ಪ್ರದೇಶದಲ್ಲಿ 45 ಕಿಲೋ ಮೀಟರ್‌ ಹಾದು ಹೋಗಲಿದೆ. ಯೋಜನೆಗಾಗಿ ಈಗಾಗಲೇ 6 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ 136 ಕಿಲೋ ಮೀಟರ್‌ ಮಾರ್ಗಕ್ಕೆ ಟೆಂಡರ್ ಪ್ರಕ್ರಿಯೆ ನಡೆದಿದೆ.

2025ಕ್ಕೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು. ಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆ (ಎಸ್‌ಟಿಟಿಆರ್‌)ಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸುಲಿಬೆಲೆ, ಹೊಸಕೋಟೆ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ತಟ್ಟೆಕೆರೆ, ಕನಕಪುರ, ರಾಮನಗರ, ಮಾಗಡಿ ಮೂಲಕ ಹಾದು ಹೋಗಲಿದೆ.

ಉದ್ಯಾನದಲ್ಲಿ 28ಕಿ.ಮಿ.ಹಾದು ಹೋಗಲಿದೆ ಇನ್ನೂ ಇದೇಸ್ಯಾಟಲೈಟ್‌ ಟೌನ್‌ ರಿಂಗ್‌ ರಸ್ತೆಯು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸೂಕ್ಷ್ಮ ವಲಯದಲ್ಲಿ ಸುಮಾರು 8 ಕಿಲೋ ಮೀಟರ್ ಸೇರಿ ಒಟ್ಟು 28 ಕಿಲೋ ಮೀಟರ್ ಹಾದು ಹೋಗಲಿದೆ. ಇದರಿಂದ ಅಲ್ಲಿನ ಪ್ರಾಣಿ, ಪಕ್ಷಗಳಿಗೆ ತೊಂದರೆ ಆಗುತ್ತದೆ. ಅರಣ್ಯ ಸಂಪತ್ತಿಗೆ ತೊಂದರೆ ಎದುರಾಗುವ ಸಾಧ್ಯತೆ ಇದೆ.    

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ   

Published On: 06 January 2023, 12:11 PM English Summary: Bannerghatta National Park, Bangalore; No tunnel road!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.