1. ಸುದ್ದಿಗಳು

BBMP ಬಿಬಿಎಂಪಿ ಬಜೆಟ್‌ 2023-2024ರಲ್ಲೂ ಜನರಿಗೆ ಸಿಹಿಸುದ್ದಿ ?

Hitesh
Hitesh
BBMP Good news for people in BBMP Budget 2023-2024?

ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಈಚೆಗೆ ಸಭೆ ನಡೆಸಿದರು.

ಸಭೆಯಲ್ಲಿ ಬಿಬಿಎಂಪಿ ಬಜೆಟ್‌ಗೆ ಸಂಬಂಧಿಸಿದಂತೆ ಹಲವು ಚರ್ಚೆಗಳು ನಡೆದವು.   

ನಗರದ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ಒದಗಿಸಬೇಕಾದ ಜನಪರ ಯೋಜನೆಗಳನ್ನು ಬಿಬಿಎಂಪಿಯ 2023-24ನೇ ಸಾಲಿನ ಆಯವ್ಯಯದಲ್ಲಿ

ಅಳವಡಿಸಿಕೊಳ್ಳಲು ಸಲಹೆ-ಸೂಚನೆಗಳನ್ನು ನೀಡುವಂತೆ ಮಾನ್ಯ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರುಗಳಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್ ಅವರನ್ನು ಕೋರಿದರು.

ಹೆಣ್ಣು ಮಕ್ಕಳಿಗೆ ಉಚಿತ ಬಸ್‌ಪಾಸ್‌: ಕೆಎಸ್ಆರ್‌ಟಿಸಿ ಅಂಬಾರಿ ಉತ್ಸವ ಬಸ್ ಲೋಕಾರ್ಪಣೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2023-24ನೇ ಸಾಲಿನ ಆಯವ್ಯಯದ ಸಿದ್ಧತೆಗೆ ಸಲಹೆ ಮತ್ತು ಸೂಚನೆಗಳನ್ನು ಪಡೆಯುವ ಸಲುವಾಗಿ

ಈಚೆಗೆ ವಿಕಾಸಸೌಧದ ಕೊಠಡಿ ಸಂಖ್ಯೆ 318ರಲ್ಲಿ ನಡೆದ ಸಭೆಯಲ್ಲಿ ಮಾನ್ಯ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಹಲವಾರು ಸಲಹೆ-ಸೂಚನೆಗಳನ್ನು ನೀಡಿದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ನಾಗರಿಕರ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪಾಲಿಕೆಯ ಜವಾಬ್ದಾರಿಯಾಗಿದೆ. 

ಈ ನಿಟ್ಟಿನಲ್ಲಿ ಪಾಲಿಕೆಗೆ ಬರುವ ಆದಾಯವನ್ನು ಗಮನದಲ್ಲಿಟ್ಟುಕೊಂಡು ರಸ್ತೆ-ಪಾದಚಾರಿ ಮಾರ್ಗಗಳ ನಿರ್ವಹಣೆ, ಉದ್ಯಾನವನಗಳಲ್ಲಿ ಆಸನಗಳ ವ್ಯವಸ್ಥೆ

ಇದನ್ನೂ ಓದಿರಿ :  weather change ಹವಾಮಾನ ಬದಲಾವಣೆಯಿಂದ ಸಂಕಷ್ಟಕ್ಕೆ ಸಿಲುಕಲಿವೆ ಭಾರತದ 9 ರಾಜ್ಯಗಳು: ಎಚ್ಚರಿಕೆ!

ವಾರ್ಡ್ ವಾರು ಪಿಒಡಬ್ಲ್ಯೂ ಕೆಲಸಗಳಿಗೆ ಹೆಚ್ಚಿನ ಆದ್ಯತೆ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಇನ್ನಿತರೆ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದರು.

ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಮಾತನಾಡಿ, ಬಿಬಿಎಂಪಿಯ 2023-24ನೇ ಆಯವ್ಯವ ಮಂಡನೆ ಮಾಡುವ ಉದ್ದೇಶದಿಂದ ಕಳೆದ 1 ತಿಂಗಳಿಂದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಜನಾಗ್ರಹ ಸಂಸ್ಥೆಯು ಪಾಲಿಕೆಯ ಎಲ್ಲಾ 243 ವಾರ್ಡ್‌ಗಳಲ್ಲಿ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಸಾರ್ವಜನಿಕರಿಂದಲೂ ಹಲವಾರು ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.

ರಾಜ್ಯದ ಆಯವ್ಯಯ ಮಂಡನೆಯಾದ ಒಂದು ವಾರದೊಳಗಾಗಿ ಬಿಬಿಎಂಪಿ ಆಯವ್ಯಯವನ್ನು ಮಂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಆರೋಗ್ಯ ಕಾರ್ಯಕ್ರಮ, ಪಾಲಿಕೆ ಆಸ್ಪತ್ರೆಗಳಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ,

ಶಿಕ್ಷಣ ಕಾರ್ಯಕ್ರಮ ಕಲ್ಯಾಣ ಕಾರ್ಯಕ್ರಮಗಳು, ಕೆರೆ ನಿರ್ವಹಣೆ, ಪಾದಚಾರಿ ಮಾರ್ಗಗಳ ವಾರ್ಷಿಕ ನಿರ್ವಹಣೆ, ರಸ್ತೆಗಳ ವಾರ್ಷಿಕ ನಿರ್ವಹಣೆ,

ಬೀದಿ ದೀಪಗಳ ನಿರ್ವಹಣೆ, ಉದ್ಯಾನಗಳ ನಿರ್ವಹಣೆ ಸೇರಿದಂತೆ ಇನ್ನಿತರೆ ಪ್ರಮುಖ ಅಂಶಗಳಿಗೆ ಅನುದಾನ ಮೀಸಲಿಡಲಾಗುವುದೆಂದು ತಿಳಿಸಿದರು.

ಇದನ್ನೂ ಓದಿರಿ :  PMKisanUpdate ಪಿ.ಎಂ ಕಿಸಾನ್‌ ಹಣ ಇದೇ ದಿನ ನಿಮ್ಮ ಖಾತೆಗೆ ಬರಲಿದೆ!

BBMP Good news for people in BBMP Budget 2023-2024?
  • ಸಭೆಯಲ್ಲಿ ಚರ್ಚೆಯಾದ ಪ್ರಮುಖ ಸಲಹೆ-ಸೂಚನೆಗಳು
  • ಬೀದಿ ದೀಪಗಳ ನಿರ್ವಹಣೆ ಸರಿಯಾಗಿ ಮಾಡುವುದು.
  • ಉದ್ಯಾನವನಗಳ ನಿರ್ವಹಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಭದ್ರತಾ ಸಿಬ್ಬಂದಿಯ ನಿಯೋಜನೆ ಮಾಡುವುದು.
  • ಬೀದಿ ಬದಿ ಕಸ ಸುರಿಯುವ ಸ್ಥಳ(ಬ್ಲಾಕ್ ಸ್ಪಾಟ್ ಗಳು)ಗಳಿಲ್ಲದಂತೆ ಮಾಡುವುದು.
  • ಕಲ್ಯಾಣ ಕಾರ್ಯಕ್ರಮಗಳಾದ ಲ್ಯಾಪ್‌ಟಾಪ್, ಹೊಲಿಗೆ ಯಂತ್ರ, ಒಂಟಿ ಮೆನೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ಅನುದಾನ ಮೀಸಲಿಡುವುದು.
  • ಪಾಲಿಕೆ ವ್ಯಾಪ್ತಿಯಲ್ಲಿ ಬಿಕ್ಷಾಟಣೆ, ಗ್ರಂಥಾಲಯ ಹಾಗೂ ಡಲ್ಟ್ ಸೆಸ್ ಗಳನ್ನು ಸಂಗ್ರಹಿಸುತ್ತಿದ್ದು, ಅದನ್ನು ಸರಿಯಾಗಿ ವಿನಿಯೋಗ ಮಾಡಲು ಕ್ರಮಕೈಗೊಳ್ಳುವುದು.
  • ರಸ್ತೆಗಳ ಅಗಲೀಕರಣಕ್ಕಾಗಿ ಅನುದಾನ ಮೀಸಲಿಡುವುದು.
  • ಪ್ರತಿ ವಾರ್ಡ್ ಗೆ ಸಾರ್ವಜನಿಕ ಕಾಮಗಾರಿಗಳಿಗೆ(ಪಿಒಡಬ್ಲ್ಯೂ) ಅನುದಾನ ಮೀಸಲಿಡುವುದು.
  • ರಾಜಕಾಲುವೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದು.
  • ಪಾದಚಾರಿ ಮಾರ್ಗಗಳ ನಿರ್ವಹಣೆಗಾಗಿ ಅನುದಾನ ಮೀಸಲಿಡುವುದು
  • ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವುದು.

ಈ ಸಂದರ್ಭದಲ್ಲಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಾಸಕರಾದ ರವಿಸುಬ್ರಮಣ್ಯ, ಉದಯ್ ಬಿ. ಗರುಡಾಚಾರ್,  ಅಖಂಡ ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಪುಟ್ಟಣ್ಣ, ಗೋಪಿನಾಥ್ ರೆಡ್ಡಿ, ಎಲ್ಲಾ ವಲಯ/ವಿಶೇಷ ಆಯುಕ್ತರು  ಹಾಜರಿದ್ದರು.  

ಇದನ್ನೂ ಓದಿರಿ : Children Missing Case 9,018 ಮಕ್ಕಳು ರಾಜ್ಯದಲ್ಲಿ ನಾಪತ್ತೆ: ಆತಂಕಕ್ಕೆ ಕಾರಣವಾದ ಅಂಕಿ- ಅಂಶ! 

Published On: 22 February 2023, 10:32 AM English Summary: BBMP Good news for people in BBMP Budget 2023-2024?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.