ನಮಸ್ಕಾರ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ಗೆ ಸ್ವಾಗತ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
1. ಕೇರಳದಲ್ಲಿ ನಿಫಾ ವೈರಸ್: ಕರ್ನಾಟಕದ ಗಡಿ ಭಾಗದಲ್ಲಿ ಕಟ್ಟೆಚ್ಚರ
2. ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
3. ಲೋಕಸಭೆಯಲ್ಲಿ ನಾರಿ ಶಕ್ತಿ ವಂದನ್ ಮಸೂದೆ ಅಂಗೀಕಾರ
4. ಬಿಜೆಪಿ- ಜೆಡಿಎಸ್ ಮೈತ್ರಿ ಬಹುತೇಕ ಫಿಕ್ಸ್!
5. ಎಲ್ಲೆಂದರಲ್ಲಿ ಕಸ ಎಸೆದರೆ 10,000 ಸಾವಿರ ದಂಡ
ಸುದ್ದಿಗಳ ವಿವರ ಈ ರೀತಿ ಇದೆ.
1.ಕೇರಳದಲ್ಲಿ ನಿಫಾ ವೈರಸ್‌ನ ಭೀತಿ ಇದೆ.ಹೀಗಾಗಿ, ಕರ್ನಾಟಕ ಮತ್ತು ಕೇರಳದ ಗಡಿ ಜಿಲ್ಲೆಗಳಾದ ದಕ್ಷಿಣ
ಕನ್ನಡ, ಉಡುಪಿ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ನಿಗಾವಹಿಸಲು
ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
2. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿದೆ.
ಗುರುವಾರ ಹಾಗೂ ಶುಕ್ರವಾರ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋಅಲರ್ಟ್ ಘೋಷಿಸಲಾಗಿದೆ.
3. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ - ನಾರಿ ಶಕ್ತಿ ವಂದನ್ ಅಧಿನಿಯಮ-2023 ಅಂಗೀಕಾರಗೊಂಡಿದೆ.
ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಮಹಿಳಾ ಮೀಸಲಾತಿ
ಮಸೂದೆಯನ್ನು ಮಂಡಿಸಲಾಗಿದ್ದು, ಲೋಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ.
ಮಸೂದೆಯ ಪರವಾಗಿ 454 ಸಂದರು ಮಸೂದೆಯ ಮತ ಚಲಾಯಿಸಿದದ್ದು, ಇಬ್ಬರು ವಿರೋಧ ವ್ಯಕ್ತಪಡಿಸಿದ್ದರು.
ಹೀಗಾಗಿ, ಬಹುಮತದೊಂದಿಗೆ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರವಾಗಿದೆ.
4. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಗುರುವಾರ ನವದೆಹಲಿಯಲ್ಲಿ
ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
5. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಪಾಲಿಕೆ ಎಚ್ಚರಿಕೆ ನೀಡಿದೆ.
ನಗರದ ಖಾಲಿ ಪ್ರದೇಶಗಳಲ್ಲಿ ಕಸ ಎಸೆಯುವವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ
ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಎಚ್ಚರಿಸಿದೆ.