News

ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ (Brahman caste certificate)

16 July, 2020 1:18 PM IST By:

ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಬುಧವಾರ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ (caste and income certificate) ನೀಡುವಂತೆ ಕಂದಾಯ ಇಲಾಖೆಯಿಂದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಶಾಸಕರು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ(brahmin development board ), ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಸೇರಿದಂತೆ ಈ ಸಮುದಾಯದ ಹಲವರು ಮನವಿ ಮಾಡಿದ್ದರು. ಹೀಗಾಗಿ ಕಂದಾಯ ಇಲಾಖೆ ಈ ತೀರ್ಮಾನ ಕೈಗೊಂಡಿದೆ. ತಾಲ್ಲೂಕು ಕಚೇರಿಗಳಲ್ಲಿ ಸದ್ಯದಲ್ಲೇ ಪ್ರಮಾಣಪತ್ರ ಸಿಗಲಿದೆ ಎಂದರು.

 ಶಿಕ್ಷಣ ಸಂಸ್ಥೆಗಳ ಪ್ರವೇಶ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರಕಾರ ಶೇ.10ರಷ್ಟು ಮೀಸಲು (Reservation) ಸೌಲಭ್ಯ ಕಲ್ಪಿಸಿದೆ. ಆದರೆ ಇದಕ್ಕೆ ಅಗತ್ಯವಾದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ತಹಶೀಲ್ದಾರ್‌ಗಳು ನೀಡುತ್ತಿಲ್ಲ ಎಂಬ ದೂರು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ಕಂದಾಯ ಇಲಾಖೆಯಿಂದ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದರು.

ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯೂ ಸ್ಥಾಪನೆ ಮಾಡಲಾಗಿದೆ.