News

ಬ್ರೇಕಿಂಗ್: ಕೇಂದ್ರದಿಂದ ಶೀಘ್ರದಲ್ಲೇ Voter ID ಜೊತೆ Aadhaar ಲಿಂಕ್ ನಿಯಮ ಜಾರಿ! ಲಿಂಕ್ ಮಾಡದೆ ಇದ್ದರೆ ಏನಾಗಲಿದೆ ಗೊತ್ತೆ?

15 May, 2022 4:53 PM IST By: Kalmesh T
Breaking: Aadhaar link rule with Voter ID soon from Center

ಕೇಂದ್ರ ಸರ್ಕಾರದಿಂದ ಇತ್ತೀಚಿಗೆ ಒಂದಿಲ್ಲೊಂದು ನಿಯಮಗಳು ಜಾರಿಗೆ ಬರುತ್ತಲೆ ಇವೆ. ಅದರಲ್ಲೂ ಆಧಾರ ಕಾರ್ಡ್ (Aadhaar Card) ಮತ್ತು ವೋಟರ್ ಐಡಿ(Voter ID)ಗೆ ಸಂಬಂಧಿಸಿದಂತೆ ಮಹತ್ವದ ವಿಷಯವೊಂದನ್ನು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಶನಿವಾರ ಹೇಳಿದ್ದಾರೆ.

ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಸ್ವಯಂ ಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್ ಮಾಡದೆ ಇದ್ದರೇ ಮಾತ್ರ "ಸಾಕಷ್ಟು ಕಾರಣಗಳನ್ನು ನೀಡಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.

ಗೋಧಿ ರಫ್ತು ನಿರ್ಬಂಧ ಆಹಾರದ ಬೆಲೆ ನಿಯಂತ್ರಿಸುತ್ತದೆ: ಭಾರತ ಸರ್ಕಾರ!

IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!

ಸುಶೀಲ್ ಚಂದ್ರ ಅವರು ಇಂದು ನಿವೃತ್ತಿಯಾಗುತ್ತಿದ್ದು, ತಮ್ಮ ಕಚೇರಿಯಿಂದ ನಿರ್ಗಮಿಸುವ ಮುನ್ನ, ಮತದಾರರು ಮತ್ತು ಚುನಾವಣಾ ಕರ್ತವ್ಯದಲ್ಲಿ ತೊಡಗಿರುವವರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ವರ್ಷದ ಮಾರ್ಚ್‌ನಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆ ಲಸಿಕೆ ಅಭಿಯಾನ ತೀವ್ರಗೊಳಿಸುವಲ್ಲಿ ಚುನಾವಣಾ ಸಮಿತಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ತಮ್ಮ ಅಧಿಕಾರಾವಧಿಯಲ್ಲಿ ನಡೆದ ಎರಡು ಪ್ರಮುಖ ಚುನಾವಣಾ ಸುಧಾರಣೆಗಳೆಂದರೆ 18 ವರ್ಷ ತುಂಬಿದವರನ್ನು ಮತದಾರರಾಗಿ ನೋಂದಾಯಿಸಲು ಒಂದು ವರ್ಷದಲ್ಲಿ ನಾಲ್ಕು ಬಾರಿ ಅವಕಾಶ ನೀಡುವುದು ಮತ್ತು ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸುಶೀಲ್ ಚಂದ್ರ ಅವರು ತಿಳಿಸಿದ್ದಾರೆ.

3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

"ಮೊದಲು, ಪ್ರತಿ ವರ್ಷ ಜನವರಿ 1 ರಂದು ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ಇತ್ತು. ಇದನ್ನು ಬದಲಾಯಿಸುವ ಅಗತ್ಯ ಇತ್ತು ಮತ್ತು ಜನ 18 ವರ್ಷ ತುಂಬಿದ ಕೂಡಲೇ ನೋಂದಾಯಿಸಿಕೊಳ್ಳಬೇಕು ಎಂದು ನಾವು ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ.

ಈಗ ಈ ಸುಧಾರಣೆಯೊಂದಿಗೆ, ನಾಲ್ಕು ದಿನಾಂಕಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಸುಧಾರಣೆಯು ಕಳೆದ 20 ವರ್ಷಗಳಿಂದ ಬಾಕಿ ಉಳಿದಿತ್ತು" ಸುಶೀಲ್ ಚಂದ್ರ ಅವರು ಹೇಳಿದ್ದಾರೆ.

PM GatiShakti: ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ಬ್ಯಾಂಡ್ ಸೇವೆ ನೀಡಲು “GatiShakti Sanchar” ಪೋರ್ಟಲ್ ಪ್ರಾರಂಭ!

G7: ಉಕ್ರೇನ್ ವಿಶ್ವದ ಪ್ರಮುಖ ಧಾನ್ಯ ಪೂರೈಕೆದಾರರ ಪ್ರಭಾವಶಾಲಿ ಸಂಘಟನೆ ರಚಿಸಲು ಸಲಹೆ ನೀಡಿದೆ!