1. ಸುದ್ದಿಗಳು

Breaking News: IT ದಾಳಿಯಲ್ಲಿ ಬರೋಬ್ಬರಿ 390 ಕೋಟಿ ಮೌಲ್ಯದ ಅಕ್ರಮ ಹಣ, ಬಂಗಾರ, ವಜ್ರ ಪತ್ತೆ!

Kalmesh T
Kalmesh T
Breaking News: IT attack..

IT ದಾಳಿಯಲ್ಲಿ ಬರೋಬ್ಬರಿ 56 ಕೋಟಿ ಹಣ, 32 ಕೆ.ಜಿ ಬಂಗಾರ, 16 ಕೋಟಿ ಮೌಲ್ಯದ ವಜ್ರ ಪತ್ತೆ! ಒಟ್ಟು 390 ಕೋಟಿ ಅಕ್ರಮ ಆಸ್ತಿ ವಶಕ್ಕೆ.

ಇದನ್ನೂ ಓದಿರಿ: ಗುಡ್‌ನ್ಯೂಸ್‌: SSLC - PUC ವಿದ್ಯಾರ್ಥಿಗಳಿಗೆ ಇಲ್ಲಿದೆ ಬರೋಬ್ಬರಿ ₹1,25,000 ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಹಣ, 32 ಕೆಜಿ ಬಂಗಾರ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿಆಸ್ತಿ ಅಥವಾ “ಲೆಕ್ಕ ರಹಿತಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರಿಗೆ ಸಿಹಿಸುದ್ದಿ: “ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ; 5 ಲಕ್ಷ ಬಹುಮಾನ! ಈಗಲೇ ಅರ್ಜಿ ಸಲ್ಲಿಸಿ..

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ.

ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ರೈತರೆ ಗಮನಿಸಿ: ಡೇರಿ ಉದ್ಯಮ ಆರಂಭಿಸಲು ನಬಾರ್ಡ್‌ ನೀಡಲಿದೆ ಬರೋಬ್ಬರಿ ₹25 ಲಕ್ಷ! ಪಡೆಯುವುದು ಹೇಗೆ ಗೊತ್ತೆ?

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು.

ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಈ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯಲಿದೆ ರೂ 20,000 ದಿಂದ 35,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎಂದು ತಿಳಿದು ಬಂದಿದೆ.

ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು.  

Published On: 11 August 2022, 03:07 PM English Summary: Breaking News: IT attack; 56 crores of money, 32 kg of gold, 16 crore worth of diamonds found!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.