News

Budget Highlights : ರೈತರಿಗೆ 0% ಬಡ್ಡಿಯಲ್ಲಿ ಸಾಲ..5 ಲಕ್ಷ ರೂ ಗೆ ಹೆಚ್ಚಳ

07 July, 2023 1:46 PM IST By: Maltesh
Budget Highlighs

ಸಿಎಂ ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್​ ಮಂಡನೆ ಶುರುವಾಗಿದೆ. ಇಲ್ಲಿಯವರೆಗೆ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಪೂರಕ ಬಜೆಟ್‌ನ ಕೆಲವೊಂದು ಹೈಲೈಟ್ಸ್‌ ಇಲ್ಲಿವೆ.

ಶಿಕ್ಷಣಕ್ಕೆ ಆದ್ಯತೆ:ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.

ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.

1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ ಮಕ್ಕಳಿಗೆ ಅನುಕೂಲ; 280 ಕೋಟಿ ರೂ. ಅನುದಾನ.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಳ. 153 ಕೋಟಿ ರೂ. ಅನುದಾನ.

ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ.

ನೀರಾವರಿಗೆ ಉತ್ತೇಜನ: ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.

770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.

ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ.

ಅನ್ನದಾತನಿಗೆ ಸಾಲ ಸೌಲಭ್ಯ : ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.

ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.

ಮೀನುಗಾರಿಕೆಗೆ ಉತ್ತೇಜನ: ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್‌ ಮಿತಿ

2ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.

ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ; 5ಕೋಟಿ ರೂ. ನೆರವು.

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ: ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ.

ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.

ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ.