1. ಸುದ್ದಿಗಳು

ಡಿಸೆಂಬರ್‌ ಒಳಗೆ ಜಿಲ್ಲೆಗೊಂದು ಗೋಶಾಲೆ ನಿರ್ಮಿಸಿ: ಪ್ರಭು ಚವ್ಹಾಣ

Hitesh
Hitesh
Build a Goshala in the district by December: Prabhu Chavan

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆಗಳನ್ನು ಡಿಸೆಂಬರ್‌ ಅಂತ್ಯದ ಒಳಗೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ ಗಡುವು ನೀಡಿದ್ದಾರೆ.

ಚರ್ಮಗಂಟು ರೋಗ ತಡೆಗೆ ಲಸಿಕಾಕರಣ ಮಾಡಲು ಸಿಬ್ಬಂದಿ ಕೊರತೆ! 

ಸರ್ಕಾರಿ ಜಿಲ್ಲಾ ಗೋಶಾಲೆಗಳ ಈಗಿನ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು ಅಧಿಕಾರಿಗಳ ಕಾರ್ಯವೈಖರಿಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಜಾಗೃತಕೋಶ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ.ಶ್ರೀನಿವಾಸ ಅವರು ಮಾತನಾಡಿ, ಸದ್ಯ ಕಾರ್ಯನಿರ್ವಹಿಸುತ್ತಿರುವ

5 ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಆಶ್ರಯ ನೀಡಲಾಗಿದೆ. 12 ಗೋಶಾಲೆಗಳು ಪೂರ್ಣಗೊಂಡಿವೆ. 8 ಪೂರ್ಣಗೊಳ್ಳುವ ಹಂತದಲ್ಲಿದ್ದು, ಇನ್ನುಳಿದವು ನಿರ್ಮಾಣ ಹಂತದಲ್ಲಿವೆ ಎಂದರು.  

ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ: ಕ್ರಿಮಿನಾಶಕ ಸಿಂಪಡಣೆಗೆ 10 ಕೋಟಿ ಅನುದಾನ; ಸಿ.ಎಂ ಬೊಮ್ಮಾಯಿ 

ಇದಕ್ಕೆ ಉತ್ತರಿಸಿದ ಸಚಿವ ಪ್ರಭು ಚವ್ಹಾಣ ಅವರು, “ನನಗೆ ಲೆಕ್ಕ ಬೇಡ ನಿರ್ಮಾಣ ಕಾಮಗಾರಿ ಪೂರ್ಣ ಮಾಡುವುದಕ್ಕೆ ಮುಂದಿನ ವರ್ಷದ ವರೆಗೆ ಕಾಯಲು ಸಾಧ್ಯವಿಲ್ಲ. ಇದೇ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸಿ, ಎಲ್ಲಾ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಆಶ್ರಯ ನೀಡಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಇನ್ನು ಸಂಚಾರಿ ಪಶು ಚಿಕಿತ್ಸಾ ವಾಹನಗಳು ಜಾನುವಾರುಗಳ ಆರೋಗ್ಯ ಸಮಸ್ಯೆಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ. ಜಾನುವಾರು ಆಂಬ್ಯುಲೆನ್ಸ್, ಇದು ಜನಪರ ಯೋಜನೆಯಾಗಿದ್ದು, ಕುಂಠಿತಗೊಳ್ಳಬಾರದು ಎಂದು ನಿರ್ದೇಶನ ನೀಡಿದರು.  

Elephant Task Force: ರಾಜ್ಯದಲ್ಲಿ ಮನುಷ್ಯ- ಕಾಡಾನೆ ಸಂಘರ್ಷ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್‌ ಪೋರ್ಸ್‌ ರಚನೆ  

ಡಿಸೆಂಬರ್‌ ಅಂತ್ಯದೊಳಗೆ ಜಿಲ್ಲಾ ಸರ್ಕಾರಿ ಗೋಶಾಲೆಗಳು ಆರಂಭವಾಗಿ ಜಾನುವಾರುಗಳಿಗೆ ಆಶ್ರಯ ನೀಡಬೇಕು.

ವಿಳಂಬ ನೀತಿ ಅನುಸರಿಸಿದರೆ ಸಹಿಸುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಅಧಿಕಾರಿಗಳಿಗೆ ಗಡುವು ನೀಡಿದರು.

ಸರ್ಕಾರಿ ಜಿಲ್ಲಾ ಗೋಶಾಲೆಗಳ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳ ಕಾರ್ಯವೈಖರಿ ನೋಡಿ ತರಾಟೆಗೆ ತೆಗೆದುಕೊಂಡರು.     

ಸಾರ್ವಜನಿಕರಿಗೆ ರಾಷ್ಟ್ರಪತಿ ಭವನ ವೀಕ್ಷಿಸಲು ಡಿಸೆಂಬರ್‌ 1ರಿಂದ ಅವಕಾಶ!   

400 ಪಶು ವೈದ್ಯಾಧಿಕಾರಿ ಮತ್ತು 250 ಕಿರಿಯ ಪಶು ವೈದ್ಯಕೀಯ ಪರೀಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬದ ಕುರಿತು ಸಚಿವರು ತರಾಟೆ ತೆಗೆದುಕೊಂಡಾಗ

ಉತ್ತರಿಸಿದ ಇಲಾಖೆ ಆಯುಕ್ತೆ ಎಸ್‌.ಅಶ್ವಥಿ ಅವರು, ಪ್ರಕರಣ ಹೈಕೋರ್ಟ್‌ ನಲ್ಲಿದ್ದು ಅಂತಿಮ ಆದೇಶದ ಹಂತದಲ್ಲಿದೆ.

ಕಿರಿಯ ಪಶು ವೈದ್ಯಕೀಯ ಪರೀಕ್ಷಕರ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನ.28 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಪಡಿಸಿದೆ ಎಂದರು.

Elephant Task Force: ರಾಜ್ಯದಲ್ಲಿ ಮನುಷ್ಯ- ಕಾಡಾನೆ ಸಂಘರ್ಷ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್‌ ಪೋರ್ಸ್‌ ರಚನೆ   

Published On: 23 November 2022, 12:25 PM English Summary: Build a Goshala in the district by December: Prabhu Chavan

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.