ರಾಜ್ಯದ ಸರ್ಕಾರಿ ನೌಕರರಿಗೆ ನೂತನ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಹೊಸ ಸರ್ಕಾರ ರಚನೆ ಆಗಿ ಕೆಲವೇ ದಿನಗಳಲ್ಲಿ ತುಟ್ಟಿ ಭತ್ಯೆ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ.
ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶೇ 4ರಷ್ಟು ಹೆಚ್ಚಳ ಮಾಡಲಾಗಿದೆ.
ಈಗಾಗಲೇ ರಾಜ್ಯದ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಮಾಣವು 31ರಷ್ಟಿದ್ದು, ಅದನ್ನು 35ಕ್ಕೆ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಮಾಣವು 31ರಿಂದ 35ಕ್ಕೆ ಹೆಚ್ಚಳವಾದಂತಾಗಿದೆ.
ಇನ್ನು 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರ ನೌಕರರಿಗೆ ಜನವರಿಯಿಂದ ಅಂದರೆ 2023ರ ಜನವರಿ ಒಂದರಿಂದ
ಅನ್ವಯವಾಗುಂತೆ ಈ ಆದೇಶ ಜಾರಿಗೆ ಬರಲಿದೆ. ಈ ಆದೇಶದ ತುಟ್ಟಿ ಭತ್ಯೆಯ ಹೆಚ್ಚಳ ಪೂರ್ವ ಅನ್ವಯವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್
ಈಗಾಗಲೇ ರಾಜ್ಯದ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಮಾಣವು 31ರಷ್ಟಿದ್ದು, ಅದನ್ನು 35ಕ್ಕೆ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ.
2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— CM of Karnataka (@CMofKarnataka) May 30, 2023
- ಮುಖ್ಯಮಂತ್ರಿ @siddaramaiah pic.twitter.com/C5wnY9ujjF
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಮಾಣವು 31ರಿಂದ 35ಕ್ಕೆ ಹೆಚ್ಚಳವಾಗಿರುವುದನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಖಚಿತ ಪಡಿಸಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಟ್ವೀಟ್‌ನಲ್ಲಿ ಆದೇಶದ ಪ್ರತಿಯನ್ನು ಲಗತಿಸಿದ್ದಾರೆ.
ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಸಂಬಂಧ ಸರ್ಕಾರಿ ನೌಕರರಿಂದ ಬೇಡಿಕೆ ಇತ್ತು. ಅಲ್ಲದೇ ಈ ಸಂಬಂಧ ಹಲವು ಚರ್ಚೆಗಳು ಸಹ ನಡೆದಿದ್ದವು.