1. ಸುದ್ದಿಗಳು

Government Employees ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: ಹಣದ ಮಳೆ!

KJ Staff
KJ Staff
ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್‌ ಏನದು ನೋಡಿ

Government Employees ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ನೀಡಿದೆ.

ಕಳೆದ ಮೂರು ವರ್ಷಗಳಿಗೂ ಹೆಚ್ಚು ಅವಧಿಯಿಂದ ರಾಜ್ಯದಲ್ಲಿ ವೇತನ ಹೆಚ್ಚಳಕ್ಕೆ ಬೇಡಿಕೆ ಇದೆ.

ಕರ್ನಾಟಕದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಬೇಕು ಹಾಗೂ ಏಳನೇ ವೇತನ ಆಯೋಗದ ವರದಿ

ಜಾರಿ ಮಾಡಬೇಕು ಎಂದು ಹಲವು ದಿನಗಳಿಂದ ನಿರಂತರವಾಗಿ ಪ್ರತಿಭಟನೆಗಳು ನಡೆದಿವೆ.

ಇದೀಗ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಆದರೆ, ಇದಕ್ಕೆ ಹಲವರು ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ.

ಹಳೇ ಪಿಂಚಣಿ ಯೋಜನೆ ಜಾರಿ

ರಾಜ್ಯ ಸರ್ಕಾರವು 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ

ರಾಜ್ಯ ಸರ್ಕಾರದ ಅಂದಾಜು 13,000 ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಿದೆ. 

ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ

ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ

ನುಡಿದಂತೆ ನಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ

ಎಂದಿದ್ದಾರೆ ಸಿ.ಎಂ ಸಿದ್ದರಾಮಯ್ಯ ಅವರು.  

13,000 ಸಾವಿರ ಸರ್ಕಾರಿ ನೌಕರರಿಗೆ ಅನುಕೂಲ

ಸರ್ಕಾರವು ಇದೀಗ 13 ಸಾವಿರ ಸರ್ಕಾರಿ ನೌಕರರನ್ನು ಹಳೇ ಪಿಂಚಣಿ ಯೋಜನೆ ಜಾರಿ ವ್ಯಾಪ್ತಿಗೆ ತರಲು ಮುಂದಾಗಿದೆ.

ಆದರೆ, ಎಲ್ಲ ಸರ್ಕಾರಿ ನೌಕರರನ್ನೂ ಹಳೇ ಪಿಂಚಣಿ ಯೋಜನೆ ಜಾರಿ ವ್ಯಾಪ್ತಿಗೆ ತರದೆ ಕೆಲವು ನಿರ್ದಿಷ್ಟ ಸರ್ಕಾರಿ

ನೌಕರರನ್ನು ಮಾತ್ರ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ತರುತ್ತಿರುವುದಕ್ಕೆ ಇದೇ ಸಂದರ್ಭದಲ್ಲಿ ವಿರೋಧವೂ ವ್ಯಕ್ತವಾಗುತ್ತಿದೆ.  

ಆದೇಶದಲ್ಲಿ ಏನಿದೆ ?

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ

ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ   01.04.2006ರಂದು

ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ

(ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ

ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಒಪ್ಪಿಗೆ ನೀಡಿದೆ. 

1. ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ

ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು

ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024ರೊಳಗೆ ಸಕ್ಷಮ ನೇಮಕಾತಿ

ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. 

2. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.

ಮೇಲಿನ 1 ರಂತೆ ಅಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದ ಒಳಗೆ

ತಮ್ಮ ಆಯ್ಕೆಯ ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.

4. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು

ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024ರ ಒಳಗಾಗಿ ಅಂತಹ ನೌಕರರನ್ನು

ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖೆ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು

5. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು

ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು

ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.

6. ದಿನಾಂಕ 01.04.2006ರ  ಪೂರ್ವದಲ್ಲಿನ ರಾಜ್ಯ ಸಿವಿಲ್‌ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ

ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು

ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ  ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌

ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ,  ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ

ದಿನಾಂಕ 30.6.2024ರ ಒಳಗಾಗಿ ಸಲ್ಲಿಸಬೇಕು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರರ ಸಮುಚಿತ

ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ

ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4)ರಂತೆ ಪರಿಶೀಲಿಸಿ 5ರಂತೆ ಕ್ರಮವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. 

Published On: 29 January 2024, 03:07 PM English Summary: Bumper news for government employees: Rain of money!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.