News

ಬಡವರಿಗೆ ಉಚಿತ ಪಡಿತರ ವಿತರಣೆ ನೀಡಲು ಅನುಮೋದನೆ

10 July, 2020 10:16 AM IST By:

ನವೆಂಬರ್‌ವರೆಗೆ ಪ್ರದಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ನೀಡುತ್ತಿರುವ ಉಚಿತ ಧಾನ್ಯ ವಿತರಣೆ ನವೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತಿದೆ.

ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ  ಯೋಜನೆ ಅಡಿಯಲ್ಲಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಿಂಗಳಿಗೆ ಐದು ಕೆ.ಜಿ. ಅಕ್ಕಿ ಅಥವಾ ಗೋಧಿ ಮತ್ತು ಕುಟುಂಬಕ್ಕೆ ಒಂದು ಕೆ.ಜಿ. ಬೇಳೆಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ನವೆಂಬರ್‌ವರೆಗೆ ನೀಡಲಾಗುವುದು. ಇದರಿಂದ 81 ಕೋಟಿ ಫಲಾನುಭವಿಗಳಿಗೆ 9.70 ಲಕ್ಷ ಟನ್ ಆಹಾರ ಧಾನ್ಯ ದೊರೆಯುವ ಯೋಜನೆ ಇದಾಗಲಿದೆ ಎಂದು ಸರ್ಕಾರ ಹೇಳಿದೆ.  ಕೆಲದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್‌ವರೆಗೆ ಉಚಿತವಾಗಿ ಧಾನ್ಯ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಅದಕ್ಕೆ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.