1. ಸುದ್ದಿಗಳು

ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್; ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ

Hitesh
Hitesh
Cash for Transfering in State; HD Kumaraswamy Is a Serious allegation

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ವರ್ಗಾವಣೆ ದಂಧೆ ಅಥವಾ ಕಾಸಿಗಾಗಿ ಪೋಸ್ಟಿಂಗ್‌ (Money For Posting) ಎನ್ನುವುದು ಪ್ರಾರಂಭವಾಗಿದೆಯೇ ? ಇದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎತ್ತಿರುವ ಪ್ರಶ್ನೆ.

ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್‌ ಎನ್ನುವುದು ಪ್ರಾರಂಭವಾಗಿದೆ ಎನ್ನುವಂತಹ ಗಂಭೀರವಾದ ಆರೋಪವನ್ನು

ಎಚ್‌.ಡಿ ಕುಮಾರಸ್ವಾಮಿ ಅವರು (HD Kumaraswamy) ಮಾಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ಪಂಚಗ್ಯಾರಂಟಿಗಳ Indian National Congress - Karnataka ಸರಕಾರ,

ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ ಎಂದಿದ್ದಾರೆ.

ಆ ಆರನೇ ಗ್ಯಾರಂಟಿಯೇ ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ (Money For Posting) ಎಂದು ಹೇಳಿದ್ದಾರೆ.

ಅಲ್ಲದೇ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ

ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ.

ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ?

CMO ಅಂದರೆ CM of Karnataka ವೋ ಅಥವಾ Corruption of Karnataka ವೋ?? ಎಂದು ಅವರು ಪ್ರಶ್ನೆ ಮಾಡಿದ್ದು,

the-file.in ಸಂಸ್ಥೆ ವರದಿ ಮಾಡಿರುವ ಲಿಂಕ್‌ ಅನ್ನು ಸಹ ಶೇರ್‌ ಮಾಡಿದ್ದಾರೆ.    

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ,

ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ.

ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ “ರಿಮೋಟ್‌ ಕಂಟ್ರೋಲ್‌”  Remote control ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.

ಈ ಸರ್ಕಾರ ಬಂದ ಮೊದಲ ದಿನದಿಂದಲೇ “ಕಾಸಿಗಾಗಿ ಪೋಸ್ಟಿಂಗ್‌” ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼ

ಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ.

ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.  

Published On: 28 June 2023, 11:36 AM English Summary: Cash for Transfering in State; HD Kumaraswamy Is a Serious allegation

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.