ಕಾವೇರಿ ನದಿ ನೀರು ಹಂಚಿಕೆ ವಿವಾದ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ.
ಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆ ಕೈಕೊಟ್ಟಿದ್ದು, ರಾಜ್ಯದ ಜಲಾಶಯಗಳು ಬರಿದಾಗುತ್ತಿದ್ದು, ಜನ – ಜಾನುವಾರುಗಳಿಗೆ ನೀರು ಹಂಚಿಕೆ ಮಾಡುವುದು
ಸಹ ಸವಾಲಾಗಿ ಪರಿಣಮಿಸಿದೆ. ಇದೇ ಸಂದರ್ಭದಲ್ಲಿ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕು ಎಂದು
ಆದೇಶ ಬಂದಿರುವುದು ರಾಜ್ಯ ಸರ್ಕಾರವನ್ನೂ ಸಂಕಷ್ಟಕ್ಕೆ ದೂಡಿದೆ.
ಇದೀಗ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು ಹಂಚಿಕೆ ಸಂಕಷ್ಟಕ್ಕೆ ಕಾರಣವಾಗಿದೆ.
ಇಂದಿನ ಪ್ರಮುಖ ಅಪ್ಡೇಟ್ಸ್‌ಗಳನ್ನು ನೋಡುವುದಾದರೆ, ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಚರ್ಚಿಸಲು, ದೆಹಲಿಯಲ್ಲಿಂದು
ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸದರ ಸಭೆ ಕರೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ
ಈ ಸಭೆಯಲ್ಲಿ, ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು,
ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಮುಖ್ಯಮಂತ್ರಿ ಅವರು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ,
ರಾಜ್ಯದ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ.
Cauvery water ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು: ಸಿ.ಎಂ ಸಿದ್ದರಾಮಯ್ಯ ತುರ್ತು ಸಭೆ!
ಈ ಮಧ್ಯೆ ಕಾವೇರಿ ಬಿಕ್ಕಟ್ಟಿನ ಕುರಿತು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ವಿಷಯ ಪ್ರಸ್ತಾಪಿಸಿ,
ಕಾವೇರಿ ಜಲಾನಯನ ಪ್ರದೇಶದ ವಸ್ತು ಸ್ಥಿತಿಯನ್ನು ಅರಿಯಲು ಅಧಿಕಾರಿಗಳ ತಂಡವನ್ನು ಕಳುಹಿಸಬೇಕು ಎಂದು ಆಗ್ರಹಿಸಿದರು.
ತಮಿಳುನಾಡಿಗೆ ನಿತ್ಯವು 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು
ನಿಯಂತ್ರಣ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅನುಮೋದನೆ ನೀಡಿದೆ.
Cauvery ಕಾವೇರಿ ನೀರು ಹಂಚಿಕೆ: ಕೇಂದ್ರಕ್ಕೆ ಸರ್ವಪಕ್ಷ ನಿಯೋಗ
ಪ್ರಾಧಿಕಾರದ ಅಧ್ಯಕ್ಷ ಸೌಮಿತ್ರ ಹಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಲ್ಲದೇ ಸೆಪ್ಟಂಬರ್ 13 ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ನೀರು ಹರಿಸುವಂತೆ ಪ್ರಾಧಿಕಾರ ಸೂಚಿಸಿದೆ.
ಆದರೆ, ರಾಜ್ಯದಲ್ಲಿ ಮಳೆಯಾಗದೆ ಇರುವುದರಿಂದ ಆ ಪ್ರಮಾಣದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರವು ತಿಳಿಸಿದೆ.