News

Cauvery water ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೆ ಕಣ್ಣೀರು!

22 September, 2023 5:05 PM IST By: Hitesh
Cauvery water sharing: Tears again for Karnataka!

ಕರ್ನಾಟಕವು ಹಿಂದೆಂದೂ ಕಾಣದ ತೀವ್ರ ಬರವನ್ನು ಎದುರಿಸುತ್ತಿದೆ. ಈ ಬಾರಿ ಮುಂಗಾರು ಕೈ ಹಿಡಿಯದೆ ಸಂಕಷ್ಟ ಎದುರಾಗಿದೆ.

ಇದೇ ಸಂದರ್ಭದಲ್ಲಿ ಕಾವೇರಿ ನೀರು ಹಂಚಿಕೆಯಲ್ಲಿ ಎದುರಾಗಿರುವ ಸವಾಲಿನಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ

ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಯಾಗುವ ಆತಂಕ ಎದುರುಗೊಂಡಿದೆ. ಅದರ ವಿವರ ಇಲ್ಲಿದೆ. 

ಕಾವೇರಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ ಆಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀಡಿದ

ನಿರ್ದೇಶನಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು,

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ತಮಿಳುನಾಡಿಗೆ ಮುಂದಿನ 15 ದಿನಗಳ ಅವಧಿಗೆ

ನಿತ್ಯವೂ 5 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರು ಬಿಡುವಂತೆ ನಿರ್ದೇಶನ ನೀಡಿದೆ.

ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳನ್ನು ಪ್ರತಿನಿಧಿಸುವ ವಕೀಲರ ವಾದ ಆಲಿಸಿದ

ನಂತರ ತ್ರಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ: Cauvery Dispute | ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೆ ಕಣ್ಣೀರು! | Water | Karnataka vs Tamil Nadu

ಇದರ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಈ ಸವಾಲನ್ನು ಹೇಗೆ ಎದುರಿಸಬೇಕು ಎನ್ನುವ ಪ್ರಶ್ನೆ ಎದುರಾಗಿದೆ.

ಇನ್ನು ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ನೀರಿನ ಅಭಾವ ಎದುರಾಗಿದೆ.

ಜಲಾಶಯದ ನೀರಿನ ಮಟ್ಟ ಗಮನಿಸಿದರೆ ಬೆಳೆ ನಾಶವಾಗುವ ಆತಂಕವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅಲ್ಲದೇ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರಲಿದೆ.

ಹೀಗಾಗಿ ರಾಜ್ಯದಲ್ಲಿನ ವಸ್ತುಸ್ಥಿತಿಯ ಕುರಿತು ಕೇಂದ್ರ ಜಲ ಸಚಿವರಿಗೆ ಮನವರಿಕೆ ಮಾಡಲಾಗಿದೆ.

ಅವರೂ ಸಹ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದಿದ್ದಾರೆ. ರಾಜ್ಯದಲ್ಲಿ ಎದುರಾಗಿರುವ ಬರದ ಸಂಕಷ್ಟದಿಂದಾಗಿ

ಈ ಬಾರಿ ಸರಳ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮಾತನಾಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು, ರಾಜ್ಯದಲ್ಲಿ

ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ.

ಹೀಗಾಗಿ, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.