News

ಸಿಬಿಎಸ್ಇ 19ನೇ ಕ್ಲಾಸ್ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

15 April, 2021 9:49 PM IST By:
Exam

ಕೊರೋನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಎಸ್ಇ ವಿಭಾಗದ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿದೆ. ಹೌದು ಮೇ ತಿಂಗಳಲ್ಲಿ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಸೋಂಕಿನ ತೀವ್ರತೆ ಹೆಚ್ಚಿರುವುದನ್ನು ಪರಿಗಣಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಸಿಬಿಎಸ್ಸಿ ಪರೀಕ್ಷೆಗಳನ್ನು ರದ್ದುಪಡಿಸುವ ಮತ್ತು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ

ಮುಂದಿನ ತಿಂಗಳು ಮೇ 4 ರಿಂದ ಜೂನ್ 10 ರವರೆಗೆ ಪಿಯುಸಿ ಪರೀಕ್ಷೆಗಳು ನಡೆಯಬೇಕಿತ್ತು.  ಆದರೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ನಂತರ ಪರೀಕ್ಷೆ ನಡೆಸುವ ಬಗ್ಗೆ ನಿರ್ಧರಿಸಲಾಗುವುದು.  ಜೂನ್ 1 ರಂದು  ಮಂಡಳಿಯು ಪರೀಕ್ಷೆಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.  15 ದಿನಗಳ ಮುಂಚೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆ ರದ್ದುಪಡಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕರ್ನಾಟಕ  ಖಾಸಗಿ ಪ್ರಾಥಮಿಕ, ಪ್ರೌಡ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಪ್ರತಿಕ್ರಿಯೆ ನೀಡಿದೆ.

ಕೋವಿಡ್ ಸಂದರ್ಭದಲ್ಲಿಯೂ ಕರ್ನಾಟಕದಲ್ಲಿ ಕಳೆದ ವರ್ಷ ರಾಜ್ಯದಲ್ಲಿ ಮೈಕ್ರೋ ಪ್ಲ್ಯಾನಿಂಗ್ ನಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಬಾರಿ ಆಫ್ ಲೈನ್ ಮೂಲಕವಾದರೂ  ಪರೀಕ್ಷೆಯನ್ನು ನಡೆಸಬೇಕೆಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ ತಿಳಿಸಿದ್ದಾರೆ.

ದೇಶದಲ್ಲಿ ಸೋಂಕು ಹಿಡಿತಕ್ಕೆ ಸಿಗದೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ , ಈಗ ಪರೀಕ್ಷೆ ನಡೆಸಿದರೆ ಸೋಂಕು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂಬ ಆತಂಕ ಹೆಚ್ಚಾಗಿದೆ. ಪರಿಸ್ಥಿತಿ ನಿಗ್ರಹಕ್ಕಾಗಿ ಪರೀಕ್ಷೆಗಳನ್ನು ರದ್ದುಪಡಿಸುವುದೇ ಉತ್ತಮವೆಂದು ಒತ್ತಡವೂ ಹೆಚ್ಚಾಗಿತ್ತು ಎಂದು ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಸ್ವಾಗತಿಸಿದೆ.