1. ಸುದ್ದಿಗಳು

ಕೊನೆಗೂ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು

CBSC

ಸಿಬಿಎಸ್ಇ ಮತ್ತು ಸಿಐಎಸ್ಸಿಇ ಪಠ್ಯಕ್ರಮಗಳ 12ನೇ ತರಗತಿ ಪರೀಕ್ಷೆ ರದ್ದಾಗಿದೆ. ಹೌದು ಕೇಂದ್ರ ಸರ್ಕಾರವು 12ನೇ ತರಗತಿ ಬೋರ್ಡ್‌ ಎಕ್ಸಾಮ್‌ ಅನ್ನು ರದ್ದು ಮಾಡಿ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರೊಂದಿಗೆ ವ್ಯಾಪಕ ಸಮಾಲೋಚನೆಗಳನ್ನು ನಡೆಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಇಂದು ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಉನ್ನತಮಟ್ಟದ ಸಭೆ ನಡೆಸಿದ ಪ್ರಧಾನಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿ ಸ್ನೇಹಿ, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಯುವಜನತೆಯ ಭವಿಷ್ಯದ ಹಿನ್ನೆಲೆಯಲ್ಲಿ ಪರೀಕ್ಷೆ ಅನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರಲ್ಲಿಯೂ ಪರೀಕ್ಷೆ ಹಾಜರಾದಲ್ಲಿ ಕೋವಿಡ್‌ ಸಮಸ್ಯೆ ಎದುರಿಸುವುದು ಹೇಗೆ ಎಂಬ ಭಯ, ಆತಂಕ ಮನೆ ಮಾಡಿತ್ತು. ಅದನ್ನು ಕೊನೆಗೊಳಿಸಲಾಗಿದೆ. ಅಲ್ಲದೇ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒತ್ತಾಯಿಸುವುದು ಬೇಡ. ಆ ಒತ್ತಡದಿಂದ ಅವರು ಪರೀಕ್ಷೆ ಬರೆಯುವುದು ಬೇಡ. ವಿದ್ಯಾರ್ಥಿಗಳನ್ನು ಸೂಕ್ಷ್ಮವಾಗಿ ಕಾಣಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬಹುತೇಕ ರಾಜ್ಯಗಳು ಪರೀಕ್ಷೆಗೆ ಒಲವು ವ್ಯಕ್ತಪಡಿಸಿದ್ದವು.ಅಂತಿಮ ನಿರ್ಧಾರ ಮೇ 29ರೊಳಗೆ ತಿಳಿಸುವಂತೆ ಸೂಚಿಸಲಾಗಿತ್ತು. ಅದರಂತೆ ಪರೀಕ್ಷೆ ನಡೆಸುವ ಮುನ್ನ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು.
ದೇಶದಲ್ಲಿ ಕೊರೊನಾ ಇಳಿಮುಖವಾಗಿದ್ದರು ಆತಂಕ ಇನ್ನೂ ಮುಂದುವರಿದಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ರದ್ದುಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಸಮಯಕ್ಕೆ ತಕ್ಕಂತೆ ವಸ್ತುನಿಷ್ಠ ಮಾದರಿಯನ್ನು ಅನುಸರಿಸಿ ಉತ್ತಮ ಮಾದರಿಯಲ್ಲಿ 12ನೇ ತರಗತಿ ಫಲಿತಾಂಶವನ್ನು ನೀಡಬೇಕು ಎಂದು ಸಂಬಂಧಿಸಿದ ಶಿಕ್ಷಣ ಕ್ಷೇತ್ರದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಅಲ್ಲದೇ ಎಲ್ಲ ರಾಜ್ಯಗಳು ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಸ್ನೇಹಿ ತೀರ್ಮಾನಗಳನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದಗಳನ್ನು ನರೇಂದ್ರ ಮೋದಿ ಹೇಳಿದ್ದಾರೆ.

ಅಲ್ಲದೇ ಹಿಂದಿನ ವರ್ಷದಂತೆ ಯಾವುದೇ ವಿದ್ಯಾರ್ಥಿಯು ಪರೀಕ್ಷೆಯನ್ನು ತೆಗೆದುಕೊಂಡೆ ತನ್ನ ಫಲಿತಾಂಶ ಬಯಸಿದಲ್ಲಿ, ಕೊರೊನಾ ಸ್ಥಿತಿ ಸುಧಾರಣೆ ನಂತರ ಸಿಬಿಎಸ್‌ಇ ನಡೆಸುವ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಪರೀಕ್ಷೆ ನಡೆಸುವ ವಿಚಾರದಲ್ಲಿ ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ಈಗ ಪರೀಕ್ಷೆ ರದ್ದುಪಡಿಸಿರುವುದರಿಂದ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

Published On: 02 June 2021, 08:45 AM English Summary: cbse 12th class board exams 2021 cancelled

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.