1. ಸುದ್ದಿಗಳು

ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 16 ಕೊನೆ ದಿನ

Police

ಕೇಂದ್ರ ಸಶಸ್ತ್ರ ಪಡೆ ಹುದ್ದೆಗೆ ಅರ್ಜಿ ಆಹ್ವಾನವಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ  ಸಲ್ಲಿಸಬಹುದು.

ಹುದ್ದೆಗಳ ವಿವರ: ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳ ಸಂಖ್ಯೆ -3068

ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳು ಸಿಆರ್‌ಪಿಎಫ್‌, ಬಿಎಸ್‌ಎಫ್‌, ಐಟಿಬಿಪಿ, ಸಿಐಎಸ್‌ಎಫ್‌, ಎಸ್‌ಎಸ್‌ಬಿ ಎಲ್ಲಾ ಪಡೆಗಳನ್ನು ಒಳಗೊಂಡಿರುತ್ತದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಆಯ್ಕೆ ಆದವರು ಭಾರತದ ಯಾವುದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-07-2020

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 18-07-2020

ಆಫ್‌ಲೈನ್‌ ಚಲನ್ ಜೆನೆರೇಟ್‌ ಮಾಡಲು ಕೊನೆ ದಿನಾಂಕ: 20-07-2020

ಆಫ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಲು ಕೊನೆ ದಿನಾಂಕ: 22-07-2020

ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1) ದಿನಾಂಕ: 29-09-2020 ರಿಂದ 05-10-2020

ಪೇಪರ್-2 ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: 01-03-2021

ವೇತನ ಶ್ರೇಣಿ: ಸಿಎಪಿಎಫ್‌ ಸಬ್‌-ಇನ್ಸ್‌ಪೆಕ್ಟರ್ (ಜೆನರಲ್ ಡ್ಯೂಟಿ) - ವೇತನ ಶ್ರೇಣಿ ಲೆವೆಲ್-6 (ರೂ.35,400- 1,12,400),
ವಯೋಮಿತಿ: ದಿನಾಂಕ 01-01-2021 ಕ್ಕೆ ಸರಿಯಾಗಿ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 25 ವರ್ಷ ವಯೋಮಿತಿ ಮೀರಿರಬಾರದು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಾಸ್‌ ಮಾಡಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ರೂ.100 ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಅಥವಾ ಆಫ್‌ಲೈನ್‌ ಮೂಲಕವು ಪಾವತಿಸಬಹುದು.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.