ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
1. ಗುಲಾಬಿ ಈರುಳ್ಳಿ ರಫ್ತೀನ ಸುಂಕ ಇಳಿಸಿದ ಕೇಂದ್ರ ಸರ್ಕಾರ
2. ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ: ಗ್ರಾಹಕರಿಗೆ ಶಾಕ್
3. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿದ ಮಳೆ
4. ಎರಡು ಸಾವಿರ ನೋಟು ಬದಲಾವಣೆಗೆ ಗಡುವು
5. ಕೃಷಿ ಜಾಗರಣ ಸಂಸ್ಥೆಗೆ ಭೇಟಿ ನೀಡಿದ: ಪಶ್ಚಿಮ ಬಂಗಾಳದ ಸಚಿವ ಬಿಪ್ಲಬ್ ರಾಯ್ ಚೌಧರಿ
6. ಕಾವೇರಿ ಕಣಿವೆ: ನೀರಿನ ಒಳಹರಿವು ಅಲ್ಪ ಪ್ರಮಾಣದಲ್ಲಿ ಹೆಚ್ಚಳ
ಸುದ್ದಿಗಳ ವಿವರ ಈ ರೀತಿ ಇದೆ.
1. ಗುಲಾಬಿ ಈರುಳ್ಳಿ ರಫ್ತಿನ ಮೇಲೆ ಇದ್ದ ಸುಂಕವನ್ನು ಕೇಂದ್ರ ಸರ್ಕಾರವು ಇಳಿಸಿದೆ.
ಬೆಂಗಳೂರು ಗುಲಾಬಿ ಈರುಳ್ಳಿ ರಫ್ತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕೆಲವು ನಿರ್ದಿಷ್ಟ ಷರತ್ತುಗಳನ್ನಿ ವಿಧಿಸಿತ್ತು.
ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆಯನ್ನು ಸುಧಾರಿಸುವುದು
ಹಾಗೂ ಬೆಲೆ ನಿಯಂತ್ರಣ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ
ಸರ್ಕಾರ ಆ.ಗಸ್ಟ್‌ನಲ್ಲಿ ಈರುಳ್ಳಿ ರಫ್ತಿನ ಮೇಲೆ ಶೇಕಡ 40ರಷ್ಟು ಸುಂಕವನ್ನು ವಿಧಿಸಿತ್ತು.
ಇದೀಗ ಬದಲಾವಣೆ ಮಾಡಲಾಗಿದೆ.
------------------
2. ಕಳೆದ ಕೆಲವು ದಿನಗಳಿಂದ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳವಾಗಿರಲಿಲ್ಲ.
ಇದೀಗ ತೈಲ ಮಾರುಕಟ್ಟೆಯ ಸಂಸ್ಥೆಗಳು ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳವನ್ನು ಮಾಡಿವೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಹೆಚ್ಚಳ ಮಾಡಲಾಗಿದೆ.
ಪರಿಷ್ಕೃತ ದರವು ಅಕ್ಟೋಬರ್ 1ರಿಂದಲೇ ದರ ಜಾರಿಗೆ ಬರಲಿದೆ. 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 209 ರೂ. ಹೆಚ್ಚಳ ಮಾಡಲಾಗಿದೆ.
ಹೀಗಾಗಿ, ದೆಹಲಿಯ ಮಾರುಕಟ್ಟೆಯಲ್ಲಿ 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,731 ರೂ ಆಗಿದೆ.
14.2 ಕೆ.ಜಿಯ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಬೆಲೆ ಪರಿಷ್ಕರಣೆ ಆಗಿಲ್ಲ.
------------------
3. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಸೋಮವಾರ ಹಾಗೂ ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ,
ಬೆಳಗಾವಿ ಹಾಗೂ ದಕ್ಷಿಣ ಕನ್ನಡದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಮಿಂಚುಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
------------------
4. ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ಕೊನೆಯ ದಿನಾಂಕವನ್ನು ಆರ್‌ಬಿಐ ವಿಸ್ತರಿಸಿದೆ.
ಇದೀಗ ಇದೇ ಅಕ್ಟೋಬರ್ 7 ರವರೆಗೆ 2 ಸಾವಿರ ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು.
ಸೆಪ್ಟೆಂಬರ್ 30ರ ವರೆಗೆ 2 ಸಾವಿರ ರೂ. ನೋಟು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.
ಜನರಿಂದ ಗಡುವು ವಿಸ್ತರಿಸಲು ಬೇಡಿಕೆ ಬಂದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
5. ಪಶ್ಚಿಮ ಬಂಗಾಳದ ಮೀನುಗಾರಿಕೆ ಸಚಿವ ಬಿಪ್ಲಬ್ ರಾಯ್ ಚೌಧರಿ ಅವರು ಭಾನುವಾರ ನವದೆಹಲಿಯ ಕೃಷಿ ಜಾಗರಣ ಕಚೇರಿಗೆ ಭೇಟಿ ನೀಡಿದರು.
ಕೃಷಿ ಜಾಗರಣ ಕಚೇರಿಯ ಒಳಗೆ ಹಾಗೂ ಹೊರಗೆ ಸಸಿಗಳನ್ನು ಇರಿಸಿ ಹಸಿರುಮಯವಾಗಿ ಇರಿಸಿಕೊಂಡಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ರೈತರಿಗಾಗಿ ಕೃಷಿ ಜಾಗರಣ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಎಂಸಿ ಡೊಮಿನಿಕ್ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.
ಅಲ್ಲದೇ ಮಿಲಿಯನೇರ್ ಫಾರ್ಮರ್ ಆಫ್ ಇಂಡಿಯಾ ಅವಾರ್ಡ್ಸ್ ಬಗ್ಗೆ ಮೆಚ್ಚುಗೆ ಸೂಚಿಸಿದರು.
------------------
6. ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ನೀರಿನ ಒಳಹರಿವು ಪ್ರಮಾಣ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ.
ಹೀಗಾಗಿ, ಸ್ಪಲ್ಪ ನಿರಾಳತೆ ಮೂಡಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.