News

Annabhagya Yojana 10 ಕೆ.ಜಿ ಉಚಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅಡ್ಡಿ: ಸಿದ್ದರಾಮಯ್ಯ ಏನು ಹೇಳಿದ್ರು?

15 June, 2023 11:51 AM IST By: Hitesh
Central government obstructing distribution of 10 kg free rice: What did Siddaramaiah say?

ಕಾಂಗ್ರೆಸ್‌ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆ.ಜಿ ಉಚಿತ ಅಕ್ಕಿ ನೀಡುವ ಯೋಜನೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು,

ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು  ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ

ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ  ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ  ಮೆ.ಟನ್ ಅಗತ್ಯವಿದೆ

ಎಂದು ಕೋರಿ ಜೂನ್‌ 9 ರಂದು  ಪತ್ರ ಬರೆಯಲಾಗಿತ್ತು. 

ಇದಕ್ಕೆ  ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು.

ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ.

ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ.ಟನ್ ಗೋಧಿ

ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ  ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ.

ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

Heavy Rain ಬಿಪೋರ್‌ಜಾಯ್‌ ಚಂಡಮಾರುತ ಪ್ರಭಾವ ರಾಜ್ಯದಲ್ಲಿ ಭಾರೀ ಮಳೆ!

ಎಫ್‌.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು.

ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ.

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರಪ್ರದೇಶ, ಛತ್ತಿಸ್‍ಗಡ್,

ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ.

ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ.

ಹೀಗಾಗಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ.

ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಶೀಘ್ರ ಲಭಿಸಲಿದೆ. ಈ ಕುರಿತು ಶೀಘ್ರ ಸ್ಪಷ್ಟ ಚಿತ್ರಣ ದೊರೆಯಲಿದೆ

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Cyclone Biparjoy ಬಿಪೋರ್‌ಜಾಯ್‌ ಚಂಡಮಾರುತ ತೀವ್ರ; ಕೇಂದ್ರ ಗೃಹ ಸಚಿವರಿಂದ ತುರ್ತು ಸಭೆ!

ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು.

ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು.

ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ

ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ

ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.  

Indira Canteen: ಇಂದಿರಾ ಕ್ಯಾಂಟೀನ್‌ ಪುನರಾರಂಭ: ವೆಚ್ಚ ಭರಿಸಲು 50;50ರ ಸೂತ್ರ!