ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಖಾಲಿ ಇರುವ ಸುಮಾರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿರಿ: ಗುಡ್‌ನ್ಯೂಸ್: 40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಪ್ರತಿ ತಿಂಗಳು ದೊರೆಯಲಿದೆ ₹1000 ..! ಅರ್ಜಿ ಸಲ್ಲಿಕೆ ಹೇಗೆ?
ಪಿಎಂ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳ ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ' ಎಂದು ಕೂಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಬಾಕಿಯಿರುವ ಸುಮಾರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಸಚಿವಾಲಯ ತಿಳಿಸಿದೆ.
ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಕಾರ್ಯಾಲಯವು, 'ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ' ಎಂದು ಹೇಳಿದೆ.
ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ
PM ಉಚಿತ ಹೊಲಿಗೆ ಯಂತ್ರ ಯೋಜನೆ; ಒಂದು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಿರಿ..! ಈಗಲೇ ಅರ್ಜಿ ಸಲ್ಲಿಸಿ
ವಿವಿಧ ಇಲಾಖೆಗಳ ಉದ್ಯೋಗಿಗಳ ಪರಿಸ್ಥಿತಿ, ಮಾನವ ಸಂಪನ್ಮೂಲದ ಸ್ಥಿತಿಗತಿ ಪರಿಶೀಲಿಸಿದ ಪ್ರಧಾನಿ, ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಲಕ್ಷ ಮಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಟ್ವಿಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಶುಭ ಸುದ್ದಿ. ಆದರೆ ಯಾವೆಲ್ಲಾ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಭರ್ತಿಗೆ ಆದೇಶ ಎಂದು ಹೊರಡಿಸಲಾಗುತ್ತದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಆದರೆ ಬಿಜೆಪಿ ಸರ್ಕಾರದ ಎರಡನೇ ಅವಧಿಯು ಪೂರ್ಣಗೊಳ್ಳುವುದರ ಒಳಗೆ ನೇಮಕಾತಿಗೆ ಆದೇಶ ಹೊರಡಿಸಬಹುದು ಎಂದು ಕೂಡ ಹೇಳಲಾಗುತ್ತಿದೆ.