News

ಆಹಾರ ಮತ್ತು ರಸಗೊಬ್ಬರದ ಮೇಲಿನ ಸಬ್ಸಿಡಿ ಕಡಿತಕ್ಕೆ ಕೇಂದ್ರ ಸರ್ಕಾರದ ಚಿಂತನೆ!

05 January, 2023 1:50 PM IST By: Hitesh
Central government's thinking to reduce subsidy on food and fertilizer!

ಆಹಾರ ಮತ್ತು ರಸಗೊಬ್ಬರ ಸಬ್ಸಿಡಿಯಲ್ಲಿ ಮುಂದಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹಲವು ಮಹತ್ವದ ಬದಲಾವಣೆಗಳನ್ನು ತರುವ ಸಾಧ್ಯತೆ ಇದೆ.

ವಸತಿ ರಹಿತರಿಗೆ ಸಿಹಿಸುದ್ದಿ: ವಸತಿ ಸಬ್ಸಿಡಿ 1.20 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಳ

ವಿವಿಧ ಕಾರಣಗಳಿಂದ ವಿತ್ತೀಯ ಕೊರತೆ ಹೆಚ್ಚಾಗುತ್ತಿದ್ದು, ವಿತ್ತೀಯ ಕೊರತೆಯನ್ನು ನೀಗಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ವಿತ್ತೀಯ ನೀತಿಯನ್ನು ಸರಿದೂಗಿಸುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು    ಆಹಾರ ಮತ್ತು ರಸಗೊಬ್ಬರ ಸಬ್ಸಿಡಿ ಮೇಲಿನ ವೆಚ್ಚವನ್ನು ವೆಚ್ಚವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Gold Rate| ಹೊಸ ವರ್ಷದ ಮೊದಲ ವಾರವೇ ಚಿನ್ನ, ಬೆಳ್ಳಿದರ ಹೆಚ್ಚಳ! 

ಏಪ್ರಿಲ್‌ನಿಂದ ಶುರುವಾಗುವ ಆರ್ಥಿಕ ವರ್ಷದಲ್ಲಿ (2023–24) ₹ 3.70 ಲಕ್ಷ ಕೋಟಿಗೆ ಆಹಾರ ಮತ್ತು ರಸಗೊಬ್ಬರದ ಸಬ್ಸಿಡಿಯನ್ನು ಇಳಿಕೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದು 2022–23ರ ವೆಚ್ಚಕ್ಕೆ ಹೋಲಿಸಿದರೆ ಶೇಕಡ 26ರಷ್ಟು ಕಡಿಮೆ ಇದೆ.

ಆಹಾರ ಮತ್ತು ರಸಗೊಬ್ಬರಗಳಿಗೆ ನೀಡುವ ಸಬ್ಸಿಡಿಯು ಕೇಂದ್ರದ ಈ ವರ್ಷದ ಬಜೆಟ್‌ನ ಎಂಟನೆಯ ಒಂದರಷ್ಟಿದೆ. ಕೇಂದ್ರವು 2023–24ರಲ್ಲಿ ಆಹಾರ ಸಬ್ಸಿಡಿಗೆ  2.30 ಲಕ್ಷ ಕೋಟಿಯನ್ನು ಮೀಸಲಿಡುವ ಉದ್ದೇಶ ಹೊಂದಿದೆ.

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ  

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಹಾರ ಸಬ್ಸಿಡಿಗೆ 2.70 ಲಕ್ಷ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ.

ರಸಗೊಬ್ಬರ ಸಬ್ಸಿಡಿ ಮೊತ್ತವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 2.30 ಲಕ್ಷ ಕೋಟಿಯಷ್ಟು ಇದೆ. ಅದು ಮುಂದಿನ ಆರ್ಥಿಕ ವರ್ಷಕ್ಕೆ 1.40 ಲಕ್ಷ ಕೋಟಿಗೆ ಇಳಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.  

Nandini and Amul| ನಂದಿನಿ ಮತ್ತು ಅಮುಲ್‌ ಬ್ರ್ಯಾಂಡ್‌ ವಿಲೀನಕ್ಕೆ ವಿರೋಧ