ಕೊರೋನಾ ಸೋಂಕಿನ ಭೀತಿಯಿಂದಾಗಿ ಮುಂದೂಡಲ್ಪಟ್ಟಿದ್ದಂತ ರಾಜ್ಯದ ಸಿಇಟಿ ಪರೀಕ್ಷೆಯನ್ನು ಇದೇ ಜುಲೈ 30, 30ರಂದು ನಡೆಸಲು ಉನ್ನತ ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಈಗಾಗಲೇ ನಡೆದು ಮುಕ್ತಾಯಗೊಳ್ಳಬೇಕಿದ್ದಂತ ಕಾಮನ್ ಎಂಟೆರೆನ್ಸ್ ಟೆಸ್ಟ್(ಸಿಇಟಿ) ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಸಿಇಟಿ ಪರೀಕ್ಷೆಗಳು ನಿಗದಿಯಂತೆ ಇದೇ ತಿಂಗಳ ಜುಲೈ 30 ಮತ್ತು 31ರಂದು ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್ ಅಶ್ವತ್ಥ ನಾರಾಯಣ ಸ್ಪಷ್ಟ ಪಡಿಸಿದ್ದಾರೆ.
ಇದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಇಟಿ ಘಟಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆ ತಡ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಹಿನ್ನಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಿ ಪರೀಕ್ಷೆ ನಡೆಸಲಾಗುವುದು. ಸಮರ್ಪಕ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರಕ್ಕೆ ಧಕ್ಕೆ ಆಗದ ಹಾಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಪಿಜಿ ಸಿಇಟಿ ಆಗಸ್ಟ್ 8 ಮತ್ತು 9 ನಡೆಯಲಿದೆ. ಆಗಸ್ಟ್ 9 ರಂದು ಡಿಪ್ಲೋಮಾ ಸಿಇಟಿ ನಡೆಯಲಿದೆ. ಕೆ-ಸೆಟ್ ಪರೀಕ್ಷೆಗಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಅವರು ಹೇಳಿದ್ದಾರೆ.