News

ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಮಳೆ ಸಾಧ್ಯತೆ; ನವೆಂಬರ್‌ 6ರಿಂದ ಚಳಿ ಆರಂಭದ ಮೂನ್ಸೂಚನೆ!

03 November, 2022 12:55 PM IST By: Kalmesh T
Chance of rain all over the country including Karnataka; Notice of the beginning of cold from November 6!

ಮುಂಬರುವ ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಚಳಿಗಾಲದಿಂದ ಉಂಟಾಗುವ ತೊಂದರೆ ಹೆಚ್ಚಾಗುವ ಸಾಧ್ಯತೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯೂ ಹೆಚ್ಚಿದೆ. ಇಲ್ಲಿದೆ ಹವಾಮಾನ ವರದಿ

Delhi Air Pollution: ಪಂಜಾಬ್‌ ಕಳೆ ಸುಡುವಿಕೆ ದೆಹಲಿ ವಾಯು ಮಾಲಿನ್ಯ ತೀವ್ರ ಏರಿಕೆ! ಶಾಲೆ ಬಂದ್‌, ಮನೆಯಿಂದ ಕೆಲಸ ಮಾಡಲು ಸೂಚನೆ..

ನವೆಂಬರ್ ತಿಂಗಳ ಮೊದಲ ದಿನದಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿಯ ಅಬ್ಬರ ನಿರಂತರವಾಗಿ ಹೆಚ್ಚುತ್ತಿದೆ. ಉತ್ತರದಿಂದ ದಕ್ಷಿಣದವರೆಗೆ ಜನರು ಈಗ ಚಳಿಯನ್ನು ಅನುಭವಿಸುತ್ತಿದ್ದಾರೆ.

ಹಾಗಾದರೆ ಇಂದಿನ ಹವಾಮಾನ, ಯಾವ ರಾಜ್ಯಗಳ ತಾಪಮಾನ ವೇಗವಾಗಿ ಕಡಿಮೆಯಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳೋಣ. 

ದೆಹಲಿಯ ಹವಾಮಾನ ಪರಿಸ್ಥಿತಿ

ಬೆಳಗ್ಗೆಯಿಂದಲೇ ದೆಹಲಿಯಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ತಾಪಮಾನವೂ ಕಡಿಮೆಯಾಗುತ್ತಿದೆ. ನೋಡಿದರೆ ದೆಹಲಿಯ ಹಲವು ಪ್ರದೇಶಗಳಲ್ಲಿ ಬೆಳಗ್ಗೆ ದಟ್ಟವಾದ ಮಂಜು ಕವಿದಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ತಾಪಮಾನ ಕಡಿಮೆಯಾಗುತ್ತಿರುವುದರಿಂದ, ಮಾಲಿನ್ಯದ ಮಟ್ಟವು ಅಪಾಯಕಾರಿ ಪರಿಸ್ಥಿತಿಯತ್ತ ಸಾಗುತ್ತಿದೆ.

ಮತ್ತೊಂದೆಡೆ ದೆಹಲಿಯಲ್ಲಿ ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ನವೆಂಬರ್ 5 ಮತ್ತು 8 ರ ನಡುವೆ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೊಸ ತಳಿಯ ಕಬ್ಬು ಯಶಸ್ವಿ ಪ್ರಯೋಗ: ಕಡಿಮೆ ವೆಚ್ಚದಲ್ಲಿ 1 ಎಕರೆಗೆ 55 ಟನ್‌ ಇಳುವರಿ!

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ

ಇಂದು ಕೂಡ ಆಂಧ್ರಪ್ರದೇಶ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಅಸ್ಸಾಂ, ನಾಗಾಲ್ಯಾಂಡ್ ಮತ್ತು ಅರುಣಾಚಲದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಮಿಳುನಾಡಿನಲ್ಲಿ ಮಳೆ ಅನಾಹುತ

ಕಳೆದ ಕೆಲವು ದಿನಗಳಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯ ಅಬ್ಬರ ಮುಂದುವರಿದಿದೆ. ಮಳೆಯಿಂದಾಗಿ ಬಹುತೇಕ ಪ್ರದೇಶಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ.

ಬಂದಿರುವ ಮಾಹಿತಿ ಪ್ರಕಾರ ಪುದುಚೇರಿ, ಕಾರೈಕ್ಕಲ್, ಕಡಲೂರು, ಮೈಲಾಡುತುರೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಶಾಲೆಗಳನ್ನು ಮುಚ್ಚಲಾಗಿದೆ.

ಅಕಾಲಿಕ ಮಳೆಯಿಂದ ಖಾರಿಫ್‌ ಬೆಳೆಗಳ ಮೇಲೆ ನಕಾರಾತ್ಮಕ ಪರಿಣಾಮ: ಎಸ್‌ಬಿಐ ವರದಿ!

ನವೆಂಬರ್ 6 ರಿಂದ ಈ ರಾಜ್ಯಗಳಲ್ಲಿ ಚಳಿ ಹೆಚ್ಚಾಗಲಿದೆ

ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಇದರ ಪರಿಣಾಮ ಈಗ ಉಳಿದ ರಾಜ್ಯಗಳ ಮೇಲೂ ಕಂಡುಬರುತ್ತಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ ನವೆಂಬರ್ 6 ರಿಂದ ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಗುಜರಾತ್, ಛತ್ತೀಸ್ ಗಢ, ರಾಜಸ್ಥಾನ, ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ.

ಇದಲ್ಲದೆ, ಈ ಅವಧಿಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 17 ರಿಂದ 19 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಬಹುದು ಎಂದು IMD ಹೇಳುತ್ತದೆ.