ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆರ್ಥಿಕ ಹಿಂಜರಿತ ಸಾಧ್ಯತೆ, ಹಣಕಾಸಿನ ಬಗ್ಗೆ ಎಚ್ಚರ ಇರಲಿ: ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್!
ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ.
ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.
ರಾಜ್ಯದ ದಕ್ಷಿಣ ಒಳನಾಡಿವ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಧಾರಾಕಾರ ಮಳೆ; ಅಡಿಕೆ ಬೆಳೆಗಾರರಿಗೆ ಸಂಕಷ್ಟ!
ಮುಂದಿನ 48 ಗಂಟೆಗಳ ಕಾಲ ಅಂದರೆ, ಮಂಗಳವಾರದ ವರೆಗೆ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇಲ್ಲ.
ಇನ್ನು ರಾಜ್ಯದಲ್ಲಿ ಮಂಗಳವಾರದ ವರೆಗೆ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಕಡಿಮೆ ಇರಲಿದ್ದು,
ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಇರುವ ಬಹಳಷ್ಟು ಸಾಧ್ಯತೆ ಇದೆ.
Ration card: “ದತ್ತಾ” ಬದಲು “ಕುತ್ತಾ”; ಅಧಿಕಾರಿ ಮುಂದೆ ಆತ ಮಾಡಿದ್ದೇನು ಗೊತ್ತಾ!
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರಾಗಿ ಮಳೆ ಆಗುವ ಸಾಧ್ಯತೆ ಇದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿವೆ.
ಇನ್ನು ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಸುಗಳಲ್ಲಿ ಕೆಚ್ಚಲು ಬಾವು ಕಾಯಿಲೆ: ಪರೀಕ್ಷೆಗೆ ನಾಲ್ಕು ಹನಿ ಹಾಲು ಸಾಕು!
ರಾಜ್ಯದ ಸಮತಟ್ಟದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 7.6 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಎಲ್ಲಿಯೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.