ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿ ತಾಪಮಾನ ಹೆಚ್ಚಳವಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರಿದಿದೆ.
ರಾಜ್ಯದ ವಿವಿಧ ಭಾಗದಲ್ಲಿ ಬಿಸಿಲಿನ ಝಳ ಪ್ರಮಾಣ ಹೆಚ್ಚಳವಾಗಲಿದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳ
ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬಿರುಗಾಳಿಯ ಮುನ್ನೆಚ್ಚರಿಕೆ: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.
ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.
ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 35.1 ಡಿ.ಸೆ ಕಾರವಾರ ದಲ್ಲಿ ದಾಖಲಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.2 ಡಿ.ಸೆ. ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ.
27ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.