ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ ಎಂದು ನೋಡುವುದಾದರೆ,
ರಾಜ್ಯದಲ್ಲಿ ಅಲ್ಲಲ್ಲಿ ಮಳೆ ಬೀಳುತ್ತಿದ್ದರೂ, ಬಹುತೇಕ ಭಾಗದಲ್ಲಿ ಒಣಹವೆ ಮುಂದುವರಿದಿದೆ.
ರಾಜ್ಯದ ಕೆಲವು ಭಾಗದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲೂ ಸಾಧಾರಣ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ
ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು:: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಗಂಟೆಗಳು: ಇಲ್ಲ
ತಾಪಮಾನ ಎಚ್ಚರಿಕೆ: ಸಾಮಾನ್ಯ
ಮುಂದಿನ 48 ಘಂಟೆಗಳು: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹೇಗಿದೆ ಹವಾಮಾನ ?
ಮುಂದಿನ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ.
ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಕೆಲವೊಮ್ಮೆ ಬಲವಾದ ಮೇ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ.
ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸುವ ಸಾಧ್ಯತೆ ಇದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.