ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವಡೆ ಮುಂದಿನ ಮೂರು ದಿನಗಳ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಬುಧವಾರವೂ ಸಹ ಮಳೆಯ ಅಬ್ಬರ ಮುಂದುವರೆಯದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕಲಬುರಗಿ, ಯಾದಗಿರಿ, ಕೋಲಾರ, ಚಿಕ್ಕಬಳಾಪುರ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂಗಾರು ಸರಿಯಾದ ಸಮಯಕ್ಕೆ ಪ್ರವೇಶಿಸಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಬಿತ್ತಣೆಕೆಗೆ ಈಗಾಗಲೇ ರೈತರು ಬೀಜ ಸಂಗ್ರಹಸಿಟ್ಟುಕೊಂಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೀಗಾಗಿ, ಜನ ಈಗಲೇ ಮುನ್ನೆಚ್ಚರಿಕೆ ವಹಿಸಿದರೆ ಮಳೆಯಿಂದ ಆಗುವ ತೊಂದರೆಯಿಂದ ಪಾರಾಗಬಹುದು ಎಂದು ಹಾಮಾನ ಇಲಾಖೆ ತಿಳಿಸಿದೆ.
ಮಂದಿನ ಮೂರು ದಿನಗಳ ಕಾಲ ಗುಡುಗುಮಿಂಚು ಸಹತಿ ಭಾರ ಮಳೆ ಸಾಧ್ಯತೆ
11 June, 2020 11:31 AM IST