News

ರಾಜ್ಯದಲ್ಲಿ ಮಳೆ ಕಡಿಮೆಯಾದರೆ ಮೋಡ ಬಿತ್ತನೆಗೆ ಕ್ರಮ: ಕೃಷಿ ಸಚಿವ ಚೆಲುವರಾಯ ಸ್ವಾಮಿ

13 June, 2023 5:16 PM IST By: Kalmesh T
Cloud seeding: If rains decrease action will be taken for cloud seeding

1 . ಪಿಎಂ ಕಿಸಾನ್‌ 14ನೇ ಕಂತು: ಕಿಸಾನ್‌ ವೆಬ್‌ಸೈಟ್‌ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

2 . ಭಾರತ ಸರ್ಕಾರದಿಂದ ರೈತರಿಗಾಗಿ “ಕಿಸಾನ್ ಕಾಲ್ ಸೆಂಟರ್” ಟೋಲ್ ಫ್ರೀ ಸಂಖ್ಯೆ ಬಿಡುಗಡೆ

3 . ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸೂಚನೆ: ಭಾರತೀಯ ಹವಾಮಾನ ಇಲಾಖೆ ವರದಿ

4 . ಕರಾವಳಿ ಭಾಗದಲ್ಲಿ ಬಿರುಗಾಳಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ  

5 . ರಾಜ್ಯದಲ್ಲಿ ಮಳೆ ಕಡಿಮೆಯಾದರೆ ಮೋಡ ಬಿತ್ತನೆಗೆ ಕ್ರಮ: ಕೃಷಿ ಸಚಿವ ಚೆಲುವರಾಯ ಸ್ವಾಮಿ

1 – One

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಪ್ರಯೋಜನಗಳನ್ನು ಪಡೆಯಲು, ಕಿಸಾನ್ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಮುಖ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸೂಚಿಸಿದೆ.

ಇಲಾಖೆ ನೀಡಿದ ಸೂಚನೆಯ ಪ್ರಕಾರ, ಕಿಸಾನ್‌ ವೆಬ್‌ಸೈಟ್‌ನಲ್ಲಿ ರೈತರು ತಮ್ಮ ಭೂ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ನಂತರ ಆಧಾರ್ ಅನ್ನು ಸಕ್ರಿಯ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಬೇಕು ಹಾಗೂ ತಮ್ಮ ತಮ್ಮ eKYC ಯನ್ನು ಪೂರ್ಣಗೊಳಿಸಿರಬೇಕು ಎಂದು ತಿಳಿಸಿದೆ.

ಪಿಎಂ ಕಿಸಾನ್‌ ಯೋಜನೆಯ ಲಾಭ ಪಡೆಯಲು ಎಲ್ಲ ರೈತರು ಇದನ್ನು ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದೆ.

2 – Two

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಸಮಸ್ಯೆಯನ್ನು ಪರಿಹರಿಸಲು, ಭಾರತ ಸರ್ಕಾರವು ರೈತರಿಗಾಗಿ ಕಿಸಾನ್ ಕಾಲ್ ಸೆಂಟರ್‌ ಟೋಲ್ ಫ್ರೀ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

ಈ ಕಿಸಾನ್‌ ಕಾಲ್‌ ಸೆಂಟರ್‌ನಲ್ಲಿ ರೈತರು ಕೃಷಿ ಕಾರ್ಯಾಚರಣೆಗಳಲ್ಲಿ ತಾಂತ್ರಿಕ ಮತ್ತು ಕೃಷಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಲಹೆ ಅಥವಾ ಮಾಹಿತಿಯನ್ನು ಪಡೆಯಬಹುದು.

ಇನ್ನೂ ಕಿಸಾನ್‌ ಕಾಲ್‌ ಸೆಂಟರ್‌ ಭಾರತದ 22 ಭಾಷೆಗಳಲ್ಲಿ ಇರಲಿದ್ದು, 1800 1801 551 ಕ್ಕೆ ಕರೆ ಮಾಡುವ ಮೂಲಕ ರೈತರು ತಮ್ಮ ಪ್ರಾದೇಶಿಕ ಭಾಷೆಗಳಲ್ಲಿಯೇ ಮಾಹಿತಿಯನ್ನು ಪಡೆಯಬಹುದು.

3 – Three

ರಾಜ್ಯದ ವಿವಿಧೆಡೆ ಮಳೆ ಮುಂದುವರೆದಿದ್ದು, ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿ, ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಿದೆ.

ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.

4 – Four

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಬಿರುಗಾಳಿಯು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಮೂನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೂ ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ.

ಅಲ್ಲದೇ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿವೆ.

5 – Five

ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ವಿಂಳಂಬವಾಗಿದೆ. ಮುಂದೆಯೂ ಸರಿಯಾಗಿ ಮಳೆಯಾಗದೆ ಇದ್ದರೆ ಮೋಡ ಬಿತ್ತನೆ ಮಾಡಲು ಚಿಂತಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30ರಷ್ಟು ಮಳೆ ಕಡಿಮೆಯಾಗಿದೆ. ಒಂದು ವಾರದಿಂದ ಮಳೆ ನಿರೀಕ್ಷೆ ಮಾಡುತ್ತಿದ್ದು, ತಡವಾಗುತ್ತಿದೆ. ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆ ಆರಂಭಿಸಲು ಹಿಂದೇಟು ಹಾಕುವಂತಾಗಿದೆ.

ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹ ಮಾಡಿಟ್ಟುಕೊಂಡಿದ್ದು, ಮುಂದಿನ ಎರಡು ದಿನ ಕಾದು ನೋಡುತ್ತೇವೆ. ಒಂದು ವೇಳೆ ಮೂರು ದಿನಗಳ ಒಳಗಾಗಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲು ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.

ಇವಿಷ್ಟು ಈ ದಿನದ ಪ್ರಮುಖ ಸುದ್ದಿಗಳು.