ಉತ್ತರ ಕರ್ನಾಟದ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚಿಗೆ ಸುವರ್ಣ ವಿಧಾನ ಸೌಧದಲ್ಲಿ ನಡೆದ ಕಲಾಪದಲ್ಲಿ 8 ಸೂತ್ರಗಳನ್ನು ಘೋಷಿಸಿದ್ದಾರೆ. ಅವುಗಳು ಯಾವವು ಎಂಬುದನ್ನು ನೋಡುವುದಾದದರೆ.
01 ನುರಿತ ಅರ್ಥಶಾಸ್ತ್ರಜ್ಞರ ಅಧ್ಯಕ್ಷತೆಯಲ್ಲಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಫಲಶ್ರುತಿಯನ್ನು ಅಧ್ಯಯನ ಮಾಡಲು ಉನ್ನತಾಧಿಕಾರ ಸಮಿತಿ ರಚನೆ.
02 ರೈತರು ಸಹಕಾರ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಅಸಲನ್ನು ಕಟ್ಟಿದ್ದಲ್ಲಿ ಆ ಸಾಲದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಸಿಎಂ 2 ಸೂತ್ರದಲ್ಲಿ ಹೇಳಿದ್ದಾರೆ.
03 ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಆರ್ಥಿಕತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ನೀಡುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ. 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
04 ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್‌ಗಾಗಿ ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ಸಿಗುವ ಅಂದಾಜಿದೆ. ಹಾಗೂ 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪನಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
05 ರಾಯಚೂರಿನಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕಾರ್ಖಾನೆಗಳ ಸ್ಥಾಪನೆಗೆ ವಿಶೇಷ ಒತ್ತು.
06 ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್‌ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
07 ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಚಿಂತನೆ.
08 ಈ ಪೈಕಿ 8ನೇ ಸೂತ್ರವಾಗಿ ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸಲಾಗುವುದು. ಇದನ್ನು ‘Centre of excellence for water management’ ಆಗಿ ಬದಲಾಯಿಸಿ ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು.
Share your comments