1. ಸುದ್ದಿಗಳು

Breaking: ಮಳೆ ಸಂತ್ರಸ್ತರಿಗೆ 25 ಸಾವಿರ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

Maltesh
Maltesh
CM Basavaraj Bommai

ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ವರುಣದೇವ ತನ್ನ ಆರ್ಭಟ ಶುರು ಹಚ್ಚಿಕೊಂಡಿದ್ದಾನೆ. ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಅಬ್ಬರದ ಮಳೆಯಾಗಿದ್ದು ಸಾಕಷ್ಟು ಅವಾಂತರ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಹೌದು ಇತ್ತ ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.  ವರುಣನ ಅಬ್ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸದ್ಯ ಮಳೆಯಿಂದ ತೊಂದರೆಗೆ ಒಳಗಾಗಿರುವ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ಭೇಟಿ ನೀಡಿ ಪರಿಶೀಲಿಸಿದರು.

Breaking: ಮಳೆ ಆರ್ಭಟ.. ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸದ್ಯ ಬೇಸಿಗೆ ಕಾಲದಲ್ಲಿಯ ಈ ಮಳೆ ಇನ್ನು ನಾಲ್ಕೈದು ದಿನಗಳವರೆಗೆ ಮುಂದುವರೆಯಲಿದೆ ಎನ್ನಲಾಗುತ್ತಿದೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಸೂಚಿಸಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಐಡಿಯಲ್ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಪರಿಶೀಲನೆ ಮಾಡಿದ ಅವರು, ರಾಜರಾಜೇಶ್ವರಿ ನಗರ ಬಡಾವಣೆಯಲ್ಲಿ ಸುಮಾರು 20 ಕಡೆಗಳಲ್ಲಿ ಸರಾಗವಾಗಿ ಮಳೆ ನೀರು ಹರಿಯಲು ಅಡೆತಡೆಗಳಿದ್ದು, ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ತಗ್ಗು ಪ್ರದೇಶಗಳಲ್ಲಿ ತೊಂದರೆಗೊಳಗಾದವರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದೆ. ಮಳೆಯಿಂದ ಹಾನಿಗೊಳಗಾದವರಿಗೆ 25 ಸಾವಿರ ರೂ. ಪರಿಹಾರ ಹಾಗೂ ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ನೀಡಲಾಗುವುದು ಎಂದರು.

ರಾಜ್ಯಾದ್ಯಂತ ಭಾರೀ ಮಳೆ: ಬರೋಬ್ಬರಿ 7 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು, ಕೆಲವೇ ಕೆಲವು ಜನರಿಂದ ನಗರ ಪ್ರದೇಶದಲ್ಲಿ ತೊಂದರೆ ಎದುರಾಗುವುದು ಸರಿಯಲ್ಲ, ತೆರವು ಕಾರ್ಯಚರಣೆಗೆ ನಿರ್ದಾಕ್ಷಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರತಿ ವರ್ಷ June 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶ ಆಗುತ್ತಿತ್ತು. ಆದರೆ ಈ ಬಾರಿ ಮೇ 27ಕ್ಕೆ ಕೇರಳಕ್ಕೆ, ನಂತರ 3 ದಿನದಲ್ಲಿ ರಾಜ್ಯಕ್ಕೆ ಮಾನ್ಸೂನ್ ಮಾರುತುಗಳು ಕರ್ನಾಟಕವನ್ನು ಪ್ರವೇಶಿಸಲಿವೆ ಎಂದು ತಜ್ಞರು ಲೆಕ್ಕಾಚಾರ  ನೀಡಿದ್ದರು.

ಸಾಮಾನ್ಯ ಜನರಿಗೆ ಮಾನ್ಸೂನ್ ಮಳೆ ಬಂದರೆ ಬಿಸಿಲು ಕಡಿಮೆ ಆಗುತ್ತೆ. ಆದರೆ ಈ ಮಳೆ ಕೃಷಿ ವಲಯದಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಮಾನ್ಸೂನ್ ಮಳೆಯ ಜೊತೆಯಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತವೆ.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

Published On: 21 May 2022, 09:42 AM English Summary: CM Basavaraj Bommai Announces Compensation

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.