ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿರಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022
ಇಲ್ಲಿದೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ;
- 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 27.25 ರಿಂದ ಶೇಕಡ 31ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.
- ತುಟ್ಟಿಭತ್ಯೆಯ ಉದ್ದೇಶಕ್ಕಾಗಿ "ಮೂಲ ವೇತನ'ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,
(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್ ಪೂರೈಕೆ ಸಿಎಂ ಬೊಮ್ಮಾಯಿ!
(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ, ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
- ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
11 ಕೋಟಿಗೂ ಹೆಚ್ಚು ರೈತರ ಖಾತೆಗೆ ಈ ದಿನ ಬರಲಿದೆ ಪಿಎಂ ಕಿಸಾನ್ 12ನೇ ಕಂತಿನ ಹಣ!
- ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 27.25 ರಿಂದ ಶೇಕಡ 31 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
- ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
- ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಲಂಪಿ ರೋಗಕ್ಕೆ ಬಲಿಯಾದ ಜಾನುವಾರುಗಳಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ: ! ಎಷ್ಟು ಗೊತ್ತೆ?
- ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.
- ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈನಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
- ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.