ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.
ಇದನ್ನೂ ಓದಿರಿ: ಡಿಸೆಂಬರ್ 19ರಂದು ಮಂಡ್ಯ ಬಂದ್‌ಗೆ ರೈತ ಸಂಘಟನೆ ಕರೆ
Nekar Samman Sheme: ಕೈಮಗ್ಗ ನೇಕಾರರಿಗೆ ತಲಾ ಐದು ಸಾವಿರ ರೂಪಾಯಿ ನೀಡುವ ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಮತ್ತು ಕೋವಿಡ್ ಮಹಾಮಾರಿ ಹಾಗೂ ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21ನೇ ಸಾಲಿನಿಂದ ಅನ್ವಯವಾಗುವಂತೆ ‘ನೇಕಾರ ಸಮ್ಮಾನ್’ ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು.
ಇದು ಕೈಮಗ್ಗ ನೇಕಾರರಿಗೆ ಸಹಾಯಕವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.
ಹೊಸ ವರ್ಷಕ್ಕೂ ಮುನ್ನವೇ ರೈತರ ಕೈತಲುಪಲಿದೆಯೇ ಪಿಎಂ ಕಿಸಾನ್ 13ನೇ ಕಂತು! ಇಲ್ಲಿದೆ ವಿವರ
ಮುಖ್ಯಮಂತ್ರಿಗಳು ನೇರ ನಗದು ವರ್ಗಾವಣೆ (DBT) ಮೂಲಕ ಪ್ರತಿ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ಐದು ಸಾವಿರ ರು.ನಂತೆ 23.43 ಕೋಟಿ ರು. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡುವುದಕ್ಕೆ ಚಾಲನೆ ನೀಡಿದ್ದಾರೆ.
2021-22ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ 9.90 ಕೋಟಿ ರು. ಡಿಬಿಟಿ ಮೂಲಕ ಬಿಡುಗಡೆ ಮಾಡಲಾಗಿದೆ.
2022-23ನೇ ಸಾಲಿನ ಬಜೆಟ್ ಅನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ಎರಡು ಸಾವಿರ ರು.ನಿಂದ ಐದು ಸಾವಿರ ರು.ಗೆ ಹೆಚ್ಚಿಸಲಾಗಿದೆ.
20 ಲಕ್ಷಕ್ಕೂ ಹೆಚ್ಚು ರೈತರಿಗೆ ಬರಲ್ಲ ಪಿಎಂ ಕಿಸಾನ್ 13 ನೇ ಕಂತಿನ ಹಣ! ಯಾಕೆ ಗೊತ್ತೆ?
ಈವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.